Great news for jewelry lovers: Huge drop in gold and silver prices
x

ಸಾಂದರ್ಭಿಕ ಚಿತ್ರ

ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ಬೆಂಗಳೂರು ಮಾತ್ರವಲ್ಲದೆ ದೇಶದ ಇತರೆ ಮೆಟ್ರೋ ನಗರಗಳಲ್ಲಿಯೂ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 14,339 ರೂ.ಗೆ ತಲುಪಿದೆ.


Click the Play button to hear this message in audio format

ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಸಿಹಿ ಸುದ್ದಿಯೊಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಏರಿಳಿತಗಳಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಹಳದಿ ಲೋಹ ಹಾಗೂ ಬೆಳ್ಳಿಯ ಬೆಲೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಆಭರಣ ಚಿನ್ನ 1,31,190 ರೂ. ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನ 1,43,120 ರೂ. ತಲುಪಿದೆ.

ಇಂದಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರವು ಸಹ ಗಣನೀಯವಾಗಿ ಇಳಿಕೆ ಕಂಡಿದ್ದು, ಒಂದು ಗ್ರಾಂ ಬೆಳ್ಳಿಗೆ 235 ರೂ. ಆಗಿದ್ದು, ಪ್ರತಿ ಕೆ.ಜಿ ಬೆಳ್ಳಿಯ ಬೆಲೆ 2.35 ಲಕ್ಷ ರೂ. ತಲುಪಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 11 ರೂ. ಏರಿಕೆಯಾಗಿದ್ದು, 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನಕ್ಕೆ 10 ರೂ. ಹೆಚ್ಚಳವಾಗಿದೆ. ಬೆಳ್ಳಿಯಲ್ಲಿ ಒಂದು ಗ್ರಾಂಗೆ 10 ರೂ. ಕಡಿಮೆಯಾಗಿದ್ದು, ಒಂದು ಕೆ.ಜಿ. ಬೆಳ್ಳಿಗೆ 10 ಸಾವಿರ ರೂ. ಕಡಿಮೆಯಾಗಿದೆ.

ಬೆಂಗಳೂರು ಮಾತ್ರವಲ್ಲದೆ ದೇಶದ ಇತರೆ ಮೆಟ್ರೋ ನಗರಗಳಲ್ಲಿಯೂ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 14,339 ರೂ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 13,415 ರೂ. ಗೆ ತಲುಪಿದೆ. ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 14,324 ರೂ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 13,130 ರೂ. ಗೆ ತಲುಪಿದೆ. ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 14,324 ರೂ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 13,130 ರೂ. ಗೆ ಇಳಿಕೆಯಾಗಿದೆ.

ದರ ಇಳಿಕೆಗೆ ಕಾರಣವೇನು?

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗಿರುವ ಮಂದಗತಿಯ ವಹಿವಾಟು ಹಾಗೂ ಡಾಲರ್ ಎದುರು ರೂಪಾಯಿಯ ಮೌಲ್ಯದ ಸ್ಥಿತಿಗತಿಗಳು ಇಂದಿನ ಈ ಬೆಲೆ ಇಳಿಕೆಗೆ ಮುಖ್ಯ ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ. ಹಳದಿ ಲೋಹ ಖರೀದಿಸಲು ಯೋಚಿಸುತ್ತಿರುವ ಮಧ್ಯಮ ವರ್ಗದ ಗ್ರಾಹಕರಿಗೆ ಇದೊಂದು ಸೂಕ್ತ ಸಮಯ ಎಂದು ತಿಳಿಸಿದ್ದಾರೆ.

Read More
Next Story