ಎಲೆಕ್ಟ್ರಾನಿಕ್ ಸಿಟಿಯಲ್ಲಿ  ಐಟಿ ರೇಡ್‌- 9 ಕೋಟಿ ರೂ. ನಗದು ಜಪ್ತಿ
x

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ ಮಾಡಲಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಐಟಿ ರೇಡ್‌- 9 ಕೋಟಿ ರೂ. ನಗದು ಜಪ್ತಿ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ ಮಾಡಲಾಗಿದೆ. ಜ್ಯುವೆಲ್ಲರಿ ಮಾಲೀಕನ ಮನೆಯಲ್ಲಿ 1.3 ಕೋಟಿ ರೂ. ಪತ್ತೆಯಾಗಿದ್ದು, ಐಟಿ ತನಿಖೆ ನಡೆದಿದೆ.


ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಎನ್ನಲಾದ ಸುಮಾರು 9 ಕೋಟಿ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳಿಂದ ಬಂದ ಮಾಹಿತಿ ಆಧರಿಸಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ವೀರಸಂದ್ರ ಸಿಗ್ನಲ್ ಸಮೀಪ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದಾಗ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ. ಹಣವನ್ನು ಸೂಕ್ತ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ತೂತುಕುಡಿ ಉದ್ಯಮಿಗೆ ಸೇರಿದ ಹಣ?

ಪ್ರಾಥಮಿಕ ಮಾಹಿತಿಯ ಪ್ರಕಾರ, ತಮಿಳುನಾಡಿನ ತೂತುಕುಡಿಯ ಸಿಂಧೂ ಜ್ಯೂವೆಲರ್ಸ್ ಮಾಲೀಕ ಸಚಿನ್ ಎಂಬುವವರಿಗೆ ಈ ಹಣ ಸೇರಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ನಗದನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ.

ಐಟಿ ಅಧಿಕಾರಿಗಳಿಂದ ಮುಂದುವರಿದ ತನಿಖೆ

ಪೊಲೀಸರು ವಶಕ್ಕೆ ಪಡೆದಿದ್ದ ನಗದು ಹಾಗೂ ಸಚಿನ್ ಅವರನ್ನು ಬಳಿಕ ಆದಾಯ ತೆರಿಗೆ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಣದ ಮೂಲ, ಅದರ ಸಾಗಾಟದ ಉದ್ದೇಶ ಮತ್ತು ಇದಕ್ಕೆ ಸಂಬಂಧಿಸಿದ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ನಿವಾಸದಲ್ಲೂ 1.3 ಕೋಟಿ ರೂ. ಪತ್ತೆ

ಇದೇ ಪ್ರಕರಣದ ತನಿಖೆಯ ಭಾಗವಾಗಿ ಸಚಿನ್ ಅವರ ನಿವಾಸದಲ್ಲಿಯೂ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುಮಾರು 1.3 ಕೋಟಿ ರೂ. ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ವಶಪಡಿಸಿಕೊಂಡ ಹಣದ ಮಾಲೀಕತ್ವ ಹಾಗೂ ಅದರ ಮೂಲಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಮೂಲ ಮತ್ತು ವಹಿವಾಟಿನ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಬಹಿರಂಗವಾಗುವ ನಿರೀಕ್ಷೆಯಿದೆ.

Read More
Next Story