ಬೆಂಗಳೂರಿನಲ್ಲಿ ವಕೀಲನನ್ನು ಗುಂಡಿಕ್ಕಿ ಹತ್ಯೆ; ಬಾಡಿಗೆ ವಿಚಾರಕ್ಕೆ ಕೊಲೆ ಶಂಕೆ
x

ಮಂಜುನಾಥ್ ಹೊರಗೆ ಬಂದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಹಣ ನೀಡಲು ಮುಂದಾಗಿದ್ದಾನೆ. ಇದೇ ವೇಳೆ ಮತ್ತೊಬ್ಬ ವ್ಯಕ್ತಿ ಅವರ ತಲೆಗೆ ಗುಂಡು ಹಾರಿಸಿದ್ದಾನೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ವಕೀಲನನ್ನು ಗುಂಡಿಕ್ಕಿ ಹತ್ಯೆ; ಬಾಡಿಗೆ ವಿಚಾರಕ್ಕೆ ಕೊಲೆ ಶಂಕೆ

ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.


ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಆತಂಕ ಮೂಡಿಸಿದೆ. ಪಟ್ಟಂದೂರು ಅಗ್ರಹಾರದಲ್ಲಿ ಭಾನುವಾರ ತಡರಾತ್ರಿ ನಡೆದ ಈ ಘಟನೆಯ ಹಿಂದೆ ಬಾಡಿಗೆ ಹಣದ ವಿಚಾರವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮೃತ ವಕೀಲರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಅವರು ತಮ್ಮ ಪತ್ನಿಯೊಂದಿಗೆ ಮನೆಯಲ್ಲಿದ್ದಾಗ ತಡರಾತ್ರಿ ಸುಮಾರು 12 ಗಂಟೆಯ ವೇಳೆಗೆ ಫೋನ್ ಕರೆ ಬಂದಿದೆ. ಬಾಡಿಗೆ ಹಣ ನೀಡುವ ನೆಪದಲ್ಲಿ ಅವರನ್ನು ಮನೆಯ ಹೊರಗೆ ಕರೆಸಲಾಗಿದೆ ಎನ್ನಲಾಗಿದೆ. ಮಂಜುನಾಥ್ ಹೊರಗೆ ಬಂದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಹಣ ನೀಡಲು ಮುಂದಾಗಿದ್ದಾನೆ. ಇದೇ ವೇಳೆ ಮತ್ತೊಬ್ಬ ವ್ಯಕ್ತಿ ಅವರ ತಲೆಗೆ ಗುಂಡು ಹಾರಿಸಿದ್ದಾನೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.

ಆಸ್ಪತ್ರೆಗೆ ಸಾಗಿಸಿದರೂ ಉಳಿಯದ ಜೀವ

ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಜುನಾಥ್ ಅವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಬಿಹಾರ ಮೂಲದ ವ್ಯಕ್ತಿಗಳ ಪಾತ್ರದ ಬಗ್ಗೆ ಪ್ರಾಥಮಿಕ ಮಾಹಿತಿ ಹೊರಬಿದ್ದಿದೆ. ಬಾಡಿಗೆ ಹಣದ ವಿಚಾರವಾಗಿ ಉಂಟಾದ ವಿವಾದವೇ ಹತ್ಯೆಗೆ ಕಾರಣವಾಗಿರಬಹುದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಹಿಂದಿನ ನಿಖರ ಕಾರಣ ಮತ್ತು ಆರೋಪಿಗಳ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರಬೇಕಿದೆ.

Read More
Next Story