ಬೆಂಗಳೂರು ಪೊಲೀಸರ ಕಾರ್ಯಾಚರಣೆ: 2.56 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
x

ಬೆಂಗಳೂರು ಪೊಲೀಸರ ಕಾರ್ಯಾಚರಣೆ: 2.56 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ಎರಡು ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಹೊರ ರಾಜ್ಯದ ಮತ್ತು ಸ್ಥಳೀಯ ಅಪರಿಚಿತ ವ್ಯಕ್ತಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.


Click the Play button to hear this message in audio format

ಭಾರಿ ಪ್ರಮಾಣದ ಮಾದಕ ವಸ್ತುಗಳ ಮಾರಾಟ ಜಾಲವನ್ನು ಭೇದಿಸುವಲ್ಲಿ ಅಶೋಕನಗರ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಹೊರ ರಾಜ್ಯದ ಮೂವರು ಮತ್ತು ಸ್ಥಳೀಯ ಇಬ್ಬರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 3.686 ಕೆ.ಜಿ ತೂಕದ 'ಹೈಡ್ರೋ ಗಾಂಜಾ'ವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಅಂದಾಜು ಮಾರುಕಟ್ಟೆ ಮೌಲ್ಯ ಬರೋಬ್ಬರಿ 2.56 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಅಶೋಕನಗರ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಿತ ಮಾದಕ ವಸ್ತುವಾದ ಹೈಡ್ರೋ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ತಂಡಗಳು, ತಕ್ಷಣವೇ ಕಾರ್ಯಪ್ರವೃತ್ತರಾಗಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿಕೊಂಡವು. ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸರ ವಿಚಾರಣೆಯ ವೇಳೆ, ಬಂಧಿತ ಐವರು ಆರೋಪಿಗಳು ಹಣದ ಆಸೆಗಾಗಿ ಈ ಕೃತ್ಯದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಅವರು ಹೊರ ರಾಜ್ಯದಿಂದ ಮತ್ತು ಸ್ಥಳೀಯವಾಗಿರುವ ಅಪರಿಚಿತ ವ್ಯಕ್ತಿಗಳ ಬಳಿ ಹೈಡ್ರೋ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ, ಅದನ್ನು ಹೆಚ್ಚಿನ ಲಾಭಕ್ಕಾಗಿ ಬೆಂಗಳೂರಿನ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದದ್ದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಅವರ ವಶದಲ್ಲಿದ್ದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ವಿವರ

ಅಶೋಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 3.222 ಕೆಜಿ ಮಾದಕ ವಸ್ತು ಜಪ್ತಿ ಮಾಡಲಾಗಿದ್ದು, 1.12 ಕೋಟಿ ರೂ. ಅಂದಾಜಿಸಲಾಗಿದೆ. ಮಾರುಕಟ್ಟೆ ಮೌಲ್ಯವು 2.24 ಕೋಟಿ ರೂ. ಆಗಿದೆ. ಮಲ್ಲೇಶ್ವರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 464 ಗ್ರಾಂ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದರ ಮೌಲ್ಯವು 16.24 ಲಕ್ಷ ರೂ. ಆಗಿದ್ದು, 32.48 ಲಕ್ಷ ರೂ. ಮಾರುಕಟ್ಟೆ ಮೌಲ್ಯದ್ದಾಗಿದೆ. ಒಟ್ಟು 3.686 ಕೆಜಿ ಮಾದಕ ವಸ್ತು ಜಪ್ತಿ ಮಾಡಲಾಗಿದ್ದು, 1.28 ಕೋಟಿ ರೂ. ಎಂಬುದಾಗಿ ಅಂದಾಜಿಸಲಾಗಿದೆ. ಮಾರುಕಟ್ಟೆ ಮೌಲ್ಯವು 2.56 ಕೋಟಿ ರೂ. ಆಗಿದೆ ಎಂದು

ಪ್ರಕರಣಗಳಲ್ಲಿ ಪ್ರಮುಖ ಕೊಂಡಿಗಳಾಗಿರುವ, ಆರೋಪಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಹೊರ ರಾಜ್ಯದ ಮತ್ತು ಸ್ಥಳೀಯ ಅಪರಿಚಿತ ವ್ಯಕ್ತಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಬಂಧಿತ ಐವರು ಆರೋಪಿಗಳನ್ನು ಈಗಾಗಲೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿನ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟವು ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿದೆ. ಬೆಂಗಳೂರು ನಗರ ಪೊಲೀಸರು ಈ ರೀತಿಯ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದನ್ನು ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ. ಸಾರ್ವಜನಿಕರು ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.

Read More
Next Story