
ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ಗೆ ಮಾರ್ಗಮಧ್ಯೆ ಬೆಂಕಿ ಕಾಣಿಸಿಕೊಂಡಿದೆ.
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ಬಸ್ ದುರಂತ: ಏಕಾಏಕಿ ಕಾಣಿಸಿಕೊಂಡ ಬೆಂಕಿ-ಪ್ರಯಾಣಿಕರು ಸೇಫ್
ಬೆಂಕಿ ಕಾಣಿಸಿಕೊಂಡ ಕೆಲವೇ ಸಮಯದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಹೀಗಾಗಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ, ಸಮಯಪ್ರಜ್ಞೆಯಿಂದ ಪ್ರಯಾಣಿಕರನ್ನು ತಕ್ಷಣ ಬಸ್ನಿಂದ ಕೆಳಗಿಳಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.
ಪ್ರಯಾಣದ ವೇಳೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಬಳಿಕ ಚಾಲಕ ಹಾಗೂ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡಿದ್ದಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸುವ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ಅಪಾಯವನ್ನು ತಪ್ಪಿಸಲಾಗಿದೆ.
ಬೆಂಕಿ ಕಾಣಿಸಿಕೊಂಡ ಕೆಲವೇ ಸಮಯದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಹೀಗಾಗಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಕೆಲಕಾಲ ಪ್ರಯಾಣಿಕರು ಆತಂಕಗೊಂಡಿದ್ದರೂ, ಎಲ್ಲರೂ ಸುರಕ್ಷಿತವಾಗಿ ಪಾರಾಗಿರುವುದು ಸಮಾಧಾನದ ಸಂಗತಿಯಾಗಿದೆ.
ಚಿತ್ರದುರ್ಗದ ದುರಂತದ ನೆನಪು
ಕಳೆದ ವರ್ಷ ಚಿತ್ರದುರ್ಗದಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ (ಗೋಳರ್ತಿ) ಬಳಿ ಡಿಸೆಂಬರ್ 25, 2025ರಂದು ಖಾಸಗಿ ಸ್ಲೀಪರ್ ಬಸ್ ಹಾಗೂ ಕಂಟೈನರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 7 ಜನರು ಮೃತಪಟ್ಟಿದ್ದರು. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಬಸ್ ಬೆಂಕಿಗಾಹುತಿಯಾಗಿತ್ತು.

