ಕುರ್ಚಿ ಸರಿಸುವ ವಿಚಾರಕ್ಕೆ ಗಲಾಟೆ; ಕೆಜಿಎಫ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ
x

ಕೆಜಿಎಫ್‌ನ ಕಾಲೇಜೊಂದರಲ್ಲಿ ಕುರ್ಚಿ ಸರಿಸುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.

ಕುರ್ಚಿ ಸರಿಸುವ ವಿಚಾರಕ್ಕೆ ಗಲಾಟೆ; ಕೆಜಿಎಫ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ

ಕುರ್ಚಿಯನ್ನು ಸ್ಥಳಾಂತರಿಸುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಯ ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಬಳಿಕ ವಿದ್ಯಾರ್ಥಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.


Click the Play button to hear this message in audio format

ಕೆಜಿಎಫ್ ಪಟ್ಟಣದ ಕಾಲೇಜೊಂದರಲ್ಲಿ ಕುರ್ಚಿ ಸ್ಥಳಾಂತರಿಸುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಆರಂಭವಾದ ಸಣ್ಣ ಜಗಳ ವಿಕೋಪಕ್ಕೆ ತಿರುಗಿದೆ. ಮಾತಿನ ಚಕಮಕಿ ಬಳಿಕ ವಿದ್ಯಾರ್ಥಿನಿಯೊಬ್ಬರ ಮೇಲೆ ಸಹಪಾಠಿ ಹಲ್ಲೆ ನಡೆಸಿರುವ ಘಟನೆ ಕಾಲೇಜಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕುರ್ಚಿಯನ್ನು ಸ್ಥಳಾಂತರಿಸುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಯ ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಬಳಿಕ ವಿದ್ಯಾರ್ಥಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯ ತೀವ್ರತೆಗೆ ವಿದ್ಯಾರ್ಥಿನಿ ತರಗತಿಯಲ್ಲೇ ಕುಸಿದು ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಘಟನೆ ವೇಳೆ ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿನಿಯನ್ನು ಬಳಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ಹಲ್ಲೆ ದೃಶ್ಯ

ಘಟನೆಯ ಸಂಪೂರ್ಣ ದೃಶ್ಯ ಕಾಲೇಜಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಘಟನೆಗೆ ನಿಖರ ಕಾರಣವೇನು, ವಿದ್ಯಾರ್ಥಿಗಳ ನಡುವೆ ಗಲಾಟೆ ಹೇಗೆ ತೀವ್ರಗೊಂಡಿತು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Read More
Next Story