Horrific series of accidents in Bagepalli: Five dead, ten injured
x
ಗಾಯಾಳುಗಳನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು.

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ: ಐವರು ದುರ್ಮರಣ, ಹತ್ತು ಮಂದಿಗೆ ಗಾಯ

ಹೆದ್ದಾರಿಯಲ್ಲಿ ವೇಗವಾಗಿ ಬಂದ ಮಹೀಂದ್ರಾ ಥಾರ್ ಕಾರು ಚಾಲಕನ ನಿಯಂತ್ರಣ ತಪ್ಪಿ, ಮುಂದೆ ಚಲಿಸುತ್ತಿದ್ದ ಪ್ರಯಾಣಿಕರ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.


Click the Play button to hear this message in audio format

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಥಾರ್ ಕಾರು, ಆಟೋ ಹಾಗೂ ಕ್ಯಾಂಟರ್ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಹೆದ್ದಾರಿಯಲ್ಲಿ ವೇಗವಾಗಿ ಬಂದ ಮಹೀಂದ್ರಾ ಥಾರ್ ಕಾರು ಚಾಲಕನ ನಿಯಂತ್ರಣ ತಪ್ಪಿ, ಮುಂದೆ ಚಲಿಸುತ್ತಿದ್ದ ಪ್ರಯಾಣಿಕರ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಆಟೋ ನಿಯಂತ್ರಣ ಕಳೆದುಕೊಂಡು ಮುಂದೆ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಸ್ಥಳದಲ್ಲೇ ಮುಗಿದ ಐದು ಜೀವಗಳು

ತೀವ್ರ ರಕ್ತಸ್ರಾವ ಹಾಗೂ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆಟೋದಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರ ದೇಹಗಳು ಆಟೋದ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದು, ಸ್ಥಳೀಯರು ಮತ್ತು ಪೊಲೀಸರು ಹರಸಾಹಸ ಪಟ್ಟು ಶವಗಳನ್ನು ಹೊರತೆಗೆದಿದ್ದಾರೆ.

ರಕ್ತಸಿಕ್ತವಾದ ಹೆದ್ದಾರಿ

ಅಪಘಾತದ ತೀವ್ರತೆಗೆ ಹೆದ್ದಾರಿಯುದ್ದಕ್ಕೂ ರಕ್ತದ ಮಡುವಿನಂತಾಗಿತ್ತು. ಆಟೋದಲ್ಲಿದ್ದವರು ಹಾಗೂ ಕಾರಿನಲ್ಲಿದ್ದವರು ಸೇರಿದಂತೆ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಕೆಲವರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಬಾಗೇಪಲ್ಲಿ ಪೊಲೀಸರು ಕ್ರೇನ್ ಬಳಸಿ ಜಖಂಗೊಂಡ ವಾಹನಗಳನ್ನು ರಸ್ತೆಯಿಂದ ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Read More
Next Story