ಚಿಕ್ಕಬಳ್ಳಾಪುರದಲ್ಲಿ ಭಯೋತ್ಪಾದನೆ ಸಂಚು ಆರೋಪ; ಒಬ್ಬ ಆರೆಸ್ಟ್‌
x

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 113 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭಯೋತ್ಪಾದನೆ ಸಂಚು ಆರೋಪ; ಒಬ್ಬ ಆರೆಸ್ಟ್‌

ಬಂಧಿತ ಆರೋಪಿ ಶಬ್ಬೀರ್ ಟೆಲಿಗ್ರಾಂನಲ್ಲಿ ಒಂದು ಗ್ರೂಪ್‌ ರಚಿಸಿಕೊಂಡು ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಕುರಿತು ಚರ್ಚೆ ನಡೆಸುತ್ತಿದ್ದ ಎನ್ನಲಾಗಿದೆ.


Click the Play button to hear this message in audio format

ಚಿಕ್ಕಬಳ್ಳಾಪುರ ನಗರದಲ್ಲಿ ಭಯೋತ್ಪಾದನಾ ಚಟುವಟಿಕೆಗೆ ಸಂಚು ರೂಪಿಸಿದ ಆರೋಪದ ಮೇಲೆ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಬಾಪೂಜಿನಗರ ನಿವಾಸಿ ಶಬ್ಬೀರ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶಬ್ಬೀರ್ ಟೆಲಿಗ್ರಾಂನಲ್ಲಿ ಒಂದು ಗ್ರೂಪ್‌ ರಚಿಸಿಕೊಂಡು ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಕುರಿತು ಚರ್ಚೆ ನಡೆಸುತ್ತಿದ್ದ ಎನ್ನಲಾಗಿದೆ. ದಾಳಿ ನಡೆಸುವುದು ಹಾಗೂ ಅದಕ್ಕಾಗಿ ಹಣ ಸಂಗ್ರಹಿಸುವ ಬಗ್ಗೆ ಗುಂಪಿನಲ್ಲಿ ಚರ್ಚೆಗಳು ನಡೆದಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶ್ರೀಮಂತರ ಅಪಹರಣಕ್ಕೆ ಸಂಚು

ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ ಹೊಂದಿಸಲು ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸುವ ಕುರಿತು ಚರ್ಚೆ ನಡೆದಿತ್ತು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಂಗ್ರಹಿಸಿದ ಹಣವನ್ನು ಬಳಸಿ ದೇಶದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಗಣ್ಯರನ್ನು ಗುರಿಯಾಗಿಸುವ ಬಗ್ಗೆ ಚರ್ಚೆ

ಟೆಲಿಗ್ರಾಂ ಗುಂಪಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಕುರಿತು ಚರ್ಚೆ ನಡೆದಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈ ಗುಂಪಿನಲ್ಲಿ ದೇಶದ ವಿವಿಧ ಭಾಗಗಳ ಕೆಲವರು ಸದಸ್ಯರಾಗಿದ್ದರು ಎನ್ನಲಾಗಿದ್ದು, ಅವರ ಸಂಪರ್ಕ ಮತ್ತು ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಬಿಎನ್‌ಎಸ್ ಅಡಿ ಪ್ರಕರಣ ದಾಖಲು

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 113 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಶಬ್ಬೀರ್‌ನನ್ನು ವಿಚಾರಣೆ ನಡೆಸಲಾಗುತ್ತಿದ್ದು, ಟೆಲಿಗ್ರಾಂ ಗುಂಪಿನ ಚಟುವಟಿಕೆಗಳು, ಅದರಲ್ಲಿದ್ದ ಸದಸ್ಯರು ಹಾಗೂ ಈ ಸಂಚಿನ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Read More
Next Story