ಧಾರವಾಡದಲ್ಲಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು
x

ಧಾರವಾಡದ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಪಲ್ಟಿಯಾಗಿ ದಾವಣಗೆರೆಯ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಧಾರವಾಡದಲ್ಲಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.


Click the Play button to hear this message in audio format

ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.

ಮೃತರನ್ನು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ವಿನಾಯಕ ಕೆ.ಯು. (25), ಮಂಜುನಾಥ (29) ಹಾಗೂ ಬಸವರಾಜ (34) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ತಕ್ಷಣ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಪೊಲೀಸರು ಮೃತರು ಹಾಗೂ ಗಾಯಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಮಾಹಿತಿ ಪಡೆದ ಗರಗ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Read More
Next Story