
ತುಮಕೂರಿನ ಶಿರಾ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 60 ವರ್ಷದ ರೈತ ರಂಗಶಾಮಣ್ಣ ಮೃತಪಟ್ಟಿದ್ದಾರೆ.
ತುಮಕೂರಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ದುರ್ಮರಣ
ಮೃತನನ್ನು ಹೊನ್ನೇನಹಳ್ಳಿ ಗ್ರಾಮದ 60 ವರ್ಷದ ರಂಗಶಾಮಣ್ಣ ಎಂದು ಗುರುತಿಸಲಾಗಿದೆ. ಆತ ಎಂದಿನಂತೆ ತಮ್ಮ ಜಮೀನಿನತ್ತ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ತುಂಡಾಗಿ ನೆಲದ ಮೇಲೆ ಬಿದ್ದಿತ್ತು. ತಂತಿ ನೆಲಕ್ಕೆ ಬಿದ್ದಿರುವುದು ಗಮನಕ್ಕೆ ಬಾರದೆ ಅದನ್ನು ಸ್ಪರ್ಶಿಸಿದಾಗ ವಿದ್ಯುತ್ ಪ್ರವಹಿಸಿದೆ.
ಜಮೀನಿನಲ್ಲಿ ಕೃಷಿ ಕೆಲಸಕ್ಕಾಗಿ ತೆರಳಿದ್ದ ವೇಳೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ರೈತರೊಬ್ಬ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿದಲ್ಲಿ ನಡೆದಿದೆ. ಮೃತನನ್ನು ಹೊನ್ನೇನಹಳ್ಳಿ ಗ್ರಾಮದ 60 ವರ್ಷದ ರಂಗಶಾಮಣ್ಣ ಎಂದು ಗುರುತಿಸಲಾಗಿದೆ. ಆತ ಎಂದಿನಂತೆ ತಮ್ಮ ಜಮೀನಿನತ್ತ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ತುಂಡಾಗಿ ನೆಲದ ಮೇಲೆ ಬಿದ್ದಿತ್ತು. ತಂತಿ ನೆಲಕ್ಕೆ ಬಿದ್ದಿರುವುದು ಗಮನಕ್ಕೆ ಬಾರದೆ ಅದರ ಸಂಪರ್ಕಕ್ಕೆ ಬಂದಾಗ ವಿದ್ಯುತ್ ಪ್ರವಹಿಸಿದೆ. ಪರಿಣಾಮ ರಂಗಶಾಮಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿದ್ಯುತ್ ತಂತಿ ನಿರ್ವಹಣೆ ಬಗ್ಗೆ ಗ್ರಾಮಸ್ಥರ ಆಕ್ರೋಶ
ಘಟನೆಯ ಬಳಿಕ ವಿದ್ಯುತ್ ತಂತಿಗಳ ನಿರ್ವಹಣೆ ಮತ್ತು ಸುರಕ್ಷತೆ ಕುರಿತು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಂತಿಗಳು ತುಂಡಾದ ಸಂದರ್ಭದಲ್ಲಿ ತಕ್ಷಣ ದುರಸ್ತಿ ಅಥವಾ ಸುರಕ್ಷತಾ ಕ್ರಮ ಕೈಗೊಳ್ಳದಿರುವುದೇ ಅವಘಡಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಿದ್ಯುತ್ ತಂತಿಗಳ ಸ್ಥಿತಿಯನ್ನು ಪರಿಶೀಲಿಸಿ, ಅಪಾಯಕಾರಿ ಸ್ಥಿತಿಯಲ್ಲಿರುವ ತಂತಿಗಳನ್ನು ತಕ್ಷಣ ಸರಿಪಡಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಪೊಲೀಸರ ಭೇಟಿ
ಮಾಹಿತಿ ತಿಳಿದ ಬಳಿಕ ಶಿರಾ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

