Terrible accident on Bengaluru-Chennai Expressway: Benz car hits divider, two killed
x

ಡಿಕ್ಕಿಯ ರಭಸಕ್ಕೆ ನಜ್ಜುಗುಜ್ಜಾಗಿರುವ ಕಾರು

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಬೆಂಜ್ ಕಾರು, ಇಬ್ಬರ ದುರ್ಮರಣ

ಮೃತರನ್ನು ಬೆಂಗಳೂರು ಮೂಲದ ರಿಜ್ವಾನ್ (30) ಮತ್ತು ಶಹಜೀಯಾ ಶೇಕ್ (28) ಎಂದು ಗುರುತಿಸಲಾಗಿದೆ. ಇವರಿಬ್ಬರು ದೇವನಹಳ್ಳಿ ಕಡೆಯಿಂದ ಹೊಸಕೋಟೆ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.


Click the Play button to hear this message in audio format

ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿಯ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯೊಬ್ಬರು ಮೃತಪಟ್ಟಿದ್ದಾರೆ.

ಶುಕ್ರವಾರ ತಡರಾತ್ರಿ (ಅಂದಾಜು ಬೆಳಗಿನ ಜಾವ 3 ಗಂಟೆ ಸುಮಾರಿಗೆ) ದೇವನಹಳ್ಳಿ ಕಡೆಯಿಂದ ಹೊಸಕೋಟೆಯತ್ತ ಅತಿ ವೇಗವಾಗಿ ಬರುತ್ತಿದ್ದ ಐಷಾರಾಮಿ ಬೆಂಜ್ (Benz) ಕಾರು, ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಅತಿಯಾದ ವೇಗದಲ್ಲಿದ್ದ ಕಾರಣ ಕಾರು ನೇರವಾಗಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೆಂಜ್ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತರ ವಿವರ

ಮೃತರನ್ನು ಬೆಂಗಳೂರು ಮೂಲದ ರಿಜ್ವಾನ್ (30) ಮತ್ತು ಶಹಜೀಯಾ ಶೇಕ್ (28) ಎಂದು ಗುರುತಿಸಲಾಗಿದೆ. ಇವರಿಬ್ಬರು ದೇವನಹಳ್ಳಿ ಕಡೆಯಿಂದ ಹೊಸಕೋಟೆ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹೊಸಕೋಟೆ ನಗರ ಸಂಚಾರ ಠಾಣೆ ಪೊಲೀಸರು, ನಜ್ಜುಗುಜ್ಜಾದ ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪೊಲೀಸರು ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಹೊಸಕೋಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Read More
Next Story