ಹುಬ್ಬಳ್ಳಿ ಬೈಪಾಸ್‌ನಲ್ಲಿ ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ಸಾವು
x

ಹುಬ್ಬಳ್ಳಿ–ಗದಗ ಬೈಪಾಸ್‌ನಲ್ಲಿ ತಡರಾತ್ರಿ ಬೈಕ್‌ಗೆ ಕೊರಿಯರ್ ವಾಹನ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ ಬೈಪಾಸ್‌ನಲ್ಲಿ ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ಸಾವು

ಬೈಕ್‌ ಹುಬ್ಬಳ್ಳಿ–ಗದಗ ಬೈಪಾಸ್‌ನಲ್ಲಿ ಕೊರಿಯರ್ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


Click the Play button to hear this message in audio format

ಹುಬ್ಬಳ್ಳಿಯಲ್ಲಿ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಂಪತಿ ಇಬ್ಬರೂ ಮೃತಪಟ್ಟಿದ್ದಾರೆ. ಹುಬ್ಬಳ್ಳಿ–ಗದಗ ಬೈಪಾಸ್‌ನಲ್ಲಿ ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಜಯರಾಜನಗರದ ನಿವಾಸಿಗಳಾದ ರಜನಿ ತಿಕಲಾ ಹಾಗೂ ಸುಕುಮಾರ ತಿಕಲಾ ಮೃತಪಟ್ಟಿದ್ದಾರೆ. ರಜನಿ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ರಜನಿ ಅವರು ರಾತ್ರಿ ಆಸ್ಪತ್ರೆಯ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಪತಿ ಸುಕುಮಾರ ಅವರು ಬೈಕ್‌ನಲ್ಲಿ ಅವರನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಕೊರಿಯರ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರವಾಗಿ ಏನು ಕಾರಣ ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಕೊರಿಯರ್ ವಾಹನ ಮತ್ತು ಅದರ ಚಾಲಕನ ಕುರಿತ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಈ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More
Next Story