
ಘಟನೆ ತಿಳಿದ ಕೂಡಲೇ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಕೆರೆಗೆ ಉರುಳಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
ಕೊಡಗು| ಕೆರೆಗೆ ಕಾರು ಉರುಳಿ ಒಂದೇ ಕುಟುಂಬದ ಮೂವರ ದುರ್ಮರಣ
ಮೃತರನ್ನು ಸಿದ್ದಾಪುರದ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಮತ್ತು ನಾಲ್ಕು ವರ್ಷದ ಪುತ್ರಿ ಲಿಯ ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ದಂಪತಿ ಹಾಗೂ ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಕೊಡಗಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸಿದ್ದಾಪುರದಿಂದ ಬಾಣಂಗಾಲ ಗ್ರಾಮದ ತಮ್ಮ ನಿವಾಸಕ್ಕೆ ಸ್ಯಾಂಟ್ರೋ ಕಾರಿನಲ್ಲಿ ಕುಟುಂಬ ಪ್ರಯಾಣಿಸುತ್ತಿತ್ತು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಕಾರಿನೊಳಗೆ ಸಿಲುಕಿದ ಮೂವರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ಸಿದ್ದಾಪುರದ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಮತ್ತು ನಾಲ್ಕು ವರ್ಷದ ಪುತ್ರಿ ಲಿಯ ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಮೂವರು ಮೃತಪಟ್ಟಿರುವುದು ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.
ಬೆಳಗ್ಗೆ ಕಾರ್ಮಿಕರಿಂದ ಘಟನೆ ಬೆಳಕಿಗೆ
ಬೆಳಗ್ಗೆ ತೋಟದ ಕಾರ್ಮಿಕರು ಕೆರೆಯಲ್ಲಿ ಕಾರು ಬಿದ್ದಿರುವುದನ್ನು ಗಮನಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಧಾವಿಸಿದವರು ಪರಿಶೀಲಿಸಿದಾಗ ಕಾರಿನಲ್ಲಿದ್ದ ಮೂವರೂ ಮೃತಪಟ್ಟಿರುವುದು ತಿಳಿದುಬಂದಿದೆ. ಘಟನೆ ತಿಳಿದ ಕೂಡಲೇ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಕೆರೆಗೆ ಉರುಳಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಡಗ ಬಾಣಂಗಾಲ ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿದೆ.

