ಕೋಲಾರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು
x

ತಿರುಪತಿ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಕುಟುಂಬದ ಕಾರು ಕೋಲಾರದಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಕೋಲಾರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ದೊಡ್ಡಕಾರಿ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ.


Click the Play button to hear this message in audio format

ತಿರುಪತಿ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಕುಟುಂಬಕ್ಕೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಸಾಗುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಪ್ರಕರಣ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಸಮೀಪ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಸೋಮವಾರ ನಡೆದಿದೆ. ಮೃತರನ್ನು ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಗಳಾದ ಶಾರದಮ್ಮ (70), ದೀಕ್ಷಿತ್ (25), ದೇವೇಂದ್ರ ಕುಮಾರ್ (41) ಹಾಗೂ ಜಿಷ್ಣು (13) ಎಂದು ಗುರುತಿಸಲಾಗಿದೆ.

ತಿರುಪತಿಯಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ

ಮೃತರು ಸೇರಿದಂತೆ ಕುಟುಂಬದ ಸದಸ್ಯರು ತಿರುಪತಿಗೆ ತೆರಳಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಬಳಿಕ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ದೊಡ್ಡಕಾರಿ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು

ಅಪಘಾತದ ವೇಳೆ ಕಾರಿನಲ್ಲಿದ್ದ ವಿಕಾಸ್, ನೀತು ಹಾಗೂ ಆದ್ವಿಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಬೇತಮಂಗಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More
Next Story