
ಬಾಗಲಕೋಟೆಯ ಬಾಂಬೆ ಕಾಲೋನಿಯಲ್ಲಿ ಪ್ರಿಯಕರನಿಂದ ಕರೆ ಬಾರದಿದ್ದಕ್ಕೆ ಮನನೊಂದು ಎರಡು ಮಕ್ಕಳ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಪ್ಪಳದಲ್ಲಿ ದುರಂತ: ಒಂದೇ ಕುಟುಂಬದ ಮೂವರು ಸಾಲಬಾಧೆಗೆ ಬೇಸತ್ತು ಆತ್ಮಹತ್ಯೆ
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಾಲಬಾಧೆಯಿಂದ ಬೇಸತ್ತು ಜ್ಯುವೆಲರಿ ಶಾಪ್ ಮಾಲೀಕ ಪ್ರಕಾಶ್, ಪತ್ನಿ ಹಾಗೂ ಮಗ ಸೇರಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಪ್ರಶಾಂತನಗರದಲ್ಲಿ ಅತ್ಯಂತ ದಾರುಣ ಘಟನೆಯೊಂದು ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ಮೂವರು ಸದಸ್ಯರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪ್ರಕಾಶ್ (54), ಅವರ ಪತ್ನಿ ಪ್ರಭಾ (46) ಹಾಗೂ ಮಗ ಶಶಾಂಕ್ (21) ಎಂದು ಗುರುತಿಸಲಾಗಿದೆ.
ಸಾಲಬಾಧೆಯ ಶಂಕೆ ಮೃತ ಪ್ರಕಾಶ್ ಅವರು ವೃತ್ತಿಯಲ್ಲಿ ಚಿನ್ನದ ಒಡವೆ ವ್ಯಾಪಾರಿಯಾಗಿದ್ದು, ರಾಯ್ಕರ್ ಜ್ಯುವೆಲರಿ ಶಾಪ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವ್ಯವಹಾರದಲ್ಲಿ ಉಂಟಾಗಿದ್ದ ವಿಪರೀತ ಸಾಲಬಾಧೆಯೇ ಕುಟುಂಬದ ಈ ತೀವ್ರ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಇಡೀ ಕುಟುಂಬವೇ ಒಟ್ಟಿಗೆ ಜೀವ ಕಳೆದುಕೊಂಡಿದೆ ಎನ್ನಲಾಗಿದೆ.
ಪೊಲೀಸ್ ತನಿಖೆ ಪ್ರಗತಿಯಲ್ಲಿ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗಂಗಾವತಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

