ಮಜಾಭಾರತ ಖ್ಯಾತಿಯ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ಸಾವು; ಅರಣ್ಯ ಪ್ರದೇಶದಲ್ಲಿ ಶವ ಪತ್ತೆ
x

ಮಜಾಭಾರತ ಖ್ಯಾತಿಯ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ಸಾವು; ಅರಣ್ಯ ಪ್ರದೇಶದಲ್ಲಿ ಶವ ಪತ್ತೆ

ಮಜಾಭಾರತ ಕಾಮಿಡಿ ಶೋ ಖ್ಯಾತಿಯ ಸಿದ್ದಾರ್ಥ ಪರಶನೂರ ಬೀದರ್ ಜಿಲ್ಲೆಯ ಹುಮನಾಬಾದ್ ಸಮೀಪ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


Click the Play button to hear this message in audio format

ಜನಪ್ರಿಯ ಕಾಮಿಡಿ ರಿಯಾಲಿಟಿ ಶೋ ಮಜಾಭಾರತ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಸಿದ್ದಾರ್ಥ ಪರಶನೂರ (36) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನಲ್ಲಿ ನಡೆದಿದೆ.

ಹುಮನಾಬಾದ್ ನಗರದ ಟೀಚರ್ಸ್ ಕಾಲೋನಿಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ ಅವರು ಜೂನ್ 13ರಂದು ಸ್ನೇಹಿತರೊಂದಿಗೆ ಮನೆಯಿಂದ ಹೊರಗಡೆ ಹೋಗಿದ್ದರು. ಆದರೆ ಮೂರು ದಿನಗಳಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಮಂಗಳವಾರ ಬೆಳಿಗ್ಗೆ ಹುಮನಾಬಾದ್ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ಪ್ರಕರಣ ದಾಖಲಿಸಲು ಮುಂದಾಗಿದ್ದರು.

ಈ ನಡುವೆ ಮೊಬೈಲ್ ಟವರ್ ಲೊಕೇಷನ್ ಆಧರಿಸಿ ಪೊಲೀಸರು ನಡೆಸಿದ ಪರಿಶೀಲನೆಯಲ್ಲಿ, ಹುಮನಾಬಾದ್ ಸಮೀಪದ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಸಿದ್ದಾರ್ಥ ಅವರ ಮೃತದೇಹ ಪತ್ತೆಯಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಿದ್ದಾರ್ಥ ಅವರ ಸಾವಿನ ಸುದ್ದಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಹುಮನಾಬಾದ್ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

Read More
Next Story