Mangaluru Moral Policing| ರೈಲ್ವೆ ಹಳಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ
x

ಬಂಧಿತ ಆರೋಪಿಗಳ ವಿರುದ್ಧ ಅಟ್ರಾಸಿಟಿ (SC/ST Act) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 

Mangaluru Moral Policing| ರೈಲ್ವೆ ಹಳಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ

ಬಂಧಿತ ಆರೋಪಿಗಳ ವಿರುದ್ಧ ಅಟ್ರಾಸಿಟಿ (SC/ST Act) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


Click the Play button to hear this message in audio format

ಮಂಗಳೂರಿನ ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ರೈಲ್ವೆ ಹಳಿಯ ಬಳಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಕಿಡಿಗೇಡಿಗಳಿಬ್ಬರು ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ವರದಿಯಾಗಿದೆ. ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂಬಾತ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ಅವರ ವಿಡಿಯೋ ಚಿತ್ರೀಕರಿಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಈ ಆರೋಪಿಗಳು ಬಾಲಕನ ವಿರುದ್ಧ ಜಾತಿ ನಿಂದನೆ ಮಾಡಿದ್ದು, ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಮಾನಹಾನಿಗೆ ಯತ್ನಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ತಕ್ಷಣವೇ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಂತ್ರಸ್ತ ವಿದ್ಯಾರ್ಥಿಗಳು ನೀಡಿದ ದೂರಿನ ಆಧಾರದ ಮೇಲೆ ಸ್ಟೀವನ್ ಮೊಂತೇರೋ ಮತ್ತು ಅವಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಅಟ್ರಾಸಿಟಿ (SC/ST Act) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಸದ್ಯ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಚಿಕ್ಕಮಗಳೂರಿನಲ್ಲೂ ನೈತಿಕ ಪೊಲೀಸ್‌ಗಿರಿ

ಕಾಫಿನಾಡು ಚಿಕ್ಕಮಗಳೂರಿನಲ್ಲೂ ಫೆ.19ರಂದು ನೈತಿಕ ಪೊಲೀಸ್‌ಗಿರಿ ಘಟನೆ ವರದಿಯಾಗಿತ್ತು. ಅನ್ಯಕೋಮಿನ ಸ್ನೇಹಿತೆಯನ್ನು ಮನೆಗೆ ಬಿಡಲು ಹೋದ ಬಾಲಕನ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಸ್ನೇಹಿತೆಯನ್ನು ಮಾನವೀಯತೆಯ ದೃಷ್ಟಿಯಿಂದ ಮನೆಗೆ ಬಿಡಲು ಹಿಂದೂ ಧರ್ಮದ ಅಪ್ರಾಪ್ತ ಬಾಲಕ ಮುಂದಾಗಿದ್ದನು. ಈ ವೇಳೆ ಆತನನ್ನು ಅಡ್ಡಗಟ್ಟಿದ ಅನ್ಯಕೋಮಿನ ಯುವಕರ ಗುಂಪೊಂದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಲ್ಲದೆ, ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದೆ.

ಪೊಲೀಸ್ ಠಾಣೆ ಮುಂದೆಯೇ ಹೈಡ್ರಾಮಾ

ಹಲ್ಲೆಗೊಳಗಾದ ಮಗನಿಗೆ ನ್ಯಾಯ ಕೇಳಲು ಆತನ ತಾಯಿ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಅವರು ಮಾಧ್ಯಮಗಳ ಮುಂದೆ ಘಟನೆಯ ಬಗ್ಗೆ ಸತ್ಯ ಬಿಚ್ಚಿಡುತ್ತಿದ್ದಾಗ, ಪೊಲೀಸ್ ಠಾಣೆಯ ಮುಂಭಾಗವೇ ಅನ್ಯಕೋಮಿನ ಗುಂಪೊಂದು ಆಕೆಯ ಮೇಲೆ ಮುಗಿಬಿದ್ದಿದೆ. ಪೊಲೀಸರ ಸಮ್ಮುಖದಲ್ಲೇ ಮಹಿಳೆಯ ಮೇಲೆ ಮುತ್ತಿಗೆ ಹಾಕಿದ ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Read More
Next Story