Horrible accident at Arabil Ghat: Cruiser-Lorry head-on collision, six dead!
x

ಮಂಡ್ಯ ಮದ್ದೂರು ತಾಲೂಕಿನ ಕೊಪ್ಪದಲ್ಲಿ ಹಾಲಿನ ಟ್ಯಾಂಕರ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಮಂಡ್ಯ| ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಮೂವರು ಅಪಘಾತಕ್ಕೆ ಬಲಿ

ಮೂವರೂ ಒಂದೇ ಸ್ಕೂಟರ್‌ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ.


Click the Play button to hear this message in audio format

ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮುಗಿಸಿ ಬೆಂಗಳೂರಿನತ್ತ ತೆರಳುತ್ತಿದ್ದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರ ಮೇಲೆ ಹಾಲಿನ ಟ್ಯಾಂಕರ್ ಹರಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಕೊಪ್ಪ ಗ್ರಾಮದ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಹಾಗೂ ಕೀರ್ತನಾ ಮೃತರು ಎಂದು ಗುರುತಿಸಲಾಗಿದೆ. ಮೂವರು ಒಂದೇ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಾಲಿನ ಟ್ಯಾಂಕರ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನಲ್ಲಿದ್ದವರು ರಸ್ತೆಗೆ ಬಿದ್ದಿದ್ದು, ಟ್ಯಾಂಕರ್ ಅವರ ಮೇಲೆ ಹರಿದಿದೆ ಎನ್ನಲಾಗಿದೆ.

ಹಬ್ಬ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ದುರಂತ

ಮೃತರು ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಹಬ್ಬದ ಕಾರ್ಯಕ್ರಮಗಳು ಮುಗಿದ ಬಳಿಕ ಮುಂಜಾನೆ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕೊಪ್ಪ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More
Next Story