
ಮೃತರನ್ನು ಗ್ರಾಮದ ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಯ ಪುತ್ರ ಮಧು (14) ಮತ್ತು ನಾರಾಯಣ್–ಮಾಧುರಿ ದಂಪತಿಯ ಪುತ್ರ ಶ್ರೀಹರಿ (8) ಎಂದು ಗುರುತಿಸಲಾಗಿದೆ.
ರಾಮನಗರ|ಹಳ್ಳದ ನೀರಲ್ಲಿ ಮುಳುಗಿ ಇಬ್ಬರು ಮಕ್ಕಳ ದುರ್ಮರಣ
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕೋಡಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ
ಆಟವಾಡಲು ತೋಟಕ್ಕೆ ತೆರಳಿದ್ದ ಇಬ್ಬರು ಮಕ್ಕಳು ಹಳ್ಳದ ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಕನಕಪುರ ತಾಲೂಕಿನ ಗುಣಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಯ ಪುತ್ರ ಮಧು (14) ಮತ್ತು ನಾರಾಯಣ್–ಮಾಧುರಿ ದಂಪತಿಯ ಪುತ್ರ ಶ್ರೀಹರಿ (8) ಎಂದು ಗುರುತಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ಗ್ರಾಮದ ಹೊರವಲಯದಲ್ಲಿದ್ದ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನಿನ್ನೆ ಇಬ್ಬರು ಮಕ್ಕಳು ತೋಟಕ್ಕೆ ಆಟವಾಡಲು ತೆರಳಿದ್ದರು. ಈ ವೇಳೆ ಹಳ್ಳದಲ್ಲಿ ಈಜಾಡಲು ಇಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕೋಡಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

