
ಇಬ್ಬರು ಯುವಕರ ಜೊತೆ ತೆರಳಿದ್ದ 23ರ ಯುವತಿ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ
ಬೆಂಗಳೂರಿನ ಚಿಕ್ಕಬಾಣಾವರ ಮೂಲದ 23 ವರ್ಷದ ವರ್ಷ ಮೃತ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಇಬ್ಬರು ಯುವಕರೊಂದಿಗೆ ಸಕಲೇಶಪುರಕ್ಕೆ ಬಂದಿದ್ದ ವರ್ಷ, ವಳಲಹಳ್ಳಿ ಕೂಡಿಗೆಯ ಶ್ರೀದೇವಿ ಲಾಡ್ಜ್‌ನಲ್ಲಿ ಅವರೊಂದಿಗೆ ರೂಂ ಪಡೆದಿದ್ದರು ಎನ್ನಲಾಗಿದೆ.
ಇಬ್ಬರು ಯುವಕರೊಂದಿಗೆ ಲಾಡ್ಜ್‌ಗೆ ತೆರಳಿದ್ದ 23 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ಲಾಡ್ಜ್‌ನ ಸ್ನಾನಗೃಹದಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಆಕೆಯೊಂದಿಗೆ ಬಂದಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ.
ಬೆಂಗಳೂರಿನ ಚಿಕ್ಕಬಾಣಾವರ ಮೂಲದ 23 ವರ್ಷದ ವರ್ಷ ಮೃತ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಇಬ್ಬರು ಯುವಕರೊಂದಿಗೆ ಸಕಲೇಶಪುರಕ್ಕೆ ಬಂದಿದ್ದ ವರ್ಷ, ವಳಲಹಳ್ಳಿ ಕೂಡಿಗೆಯ ಶ್ರೀದೇವಿ ಲಾಡ್ಜ್‌ನಲ್ಲಿ ಅವರೊಂದಿಗೆ ಕೊಠಡಿ ಪಡೆದಿದ್ದರು ಎನ್ನಲಾಗಿದೆ.
ಬೆಳಗ್ಗೆ ಯುವತಿ ಬಾತ್‌ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ವೇಳೆ ಆಕೆಯೊಂದಿಗೆ ಲಾಡ್ಜ್‌ನಲ್ಲಿದ್ದ ಇಬ್ಬರು ಯುವಕರು ಅಲ್ಲಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಯುವತಿಯ ಸಾವು ಹೇಗೆ ಸಂಭವಿಸಿದೆ ಎಂಬುದು ಸದ್ಯ ನಿಗೂಢವಾಗಿದ್ದು, ಆಕೆಯೊಂದಿಗೆ ಇದ್ದ ಇಬ್ಬರು ಯುವಕರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಉಪ ಪೊಲೀಸ್ ವರಿಷ್ಠಾಧಿಕಾರಿ ಮಾಲತೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಪತ್ತೆಯಾಗಿರುವ ಇಬ್ಬರು ಯುವಕರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿಯ ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.

