ಹಾಸನ ಬೆನ್ನಲ್ಲೇ ಕೊಡಗಿನಲ್ಲಿ ಕಾಡಾನೆ ದಾಳಿ: ತೋಟದ ಮಾಲೀಕ ಕೇಶವಯ್ಯ ಸಾವು
x

ಕಾಡಾನೆಗಳ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗುತ್ತಿದ್ದು, ಜನರ ಜೀವಕ್ಕೆ ಅಪಾಯ ಎದುರಾಗಿದೆ.

ಹಾಸನ ಬೆನ್ನಲ್ಲೇ ಕೊಡಗಿನಲ್ಲಿ ಕಾಡಾನೆ ದಾಳಿ: ತೋಟದ ಮಾಲೀಕ ಕೇಶವಯ್ಯ ಸಾವು

ಕೊಡಗಿನ ತಾರೀಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೇಶವಯ್ಯ (50) ಎಂಬುವವರು ಮೃತಪಟ್ಟಿದ್ದಾರೆ. ಎಂದಿನಂತೆ ಬೆಳಗ್ಗೆ ತಮ್ಮ ತೋಟಕ್ಕೆ ತೆರಳಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಕೇಶವಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


Click the Play button to hear this message in audio format

ಹಾಸನದಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಬೆನ್ನಲ್ಲೇ ಇದೀಗ ಕೊಡಗಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ತೋಟದ ಮಾಲೀಕರೊಬ್ಬರು ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

ತಾರೀಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿ

ಕೊಡಗಿನ ತಾರೀಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೇಶವಯ್ಯ (50) ಎಂಬುವವರು ಮೃತಪಟ್ಟಿದ್ದಾರೆ. ಎಂದಿನಂತೆ ಬೆಳಗ್ಗೆ ತಮ್ಮ ತೋಟಕ್ಕೆ ತೆರಳಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಕೇಶವಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಟುಂಬಸ್ಥರಿಂದ ಪರಿಹಾರಕ್ಕೆ ಒತ್ತಾಯ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಕಾಡಾನೆಗಳ ನಿರಂತರ ಹಾವಳಿಯಿಂದ ತೋಟಗಳಿಗೆ ತೆರಳಲು ಕಾರ್ಮಿಕರು ಹಾಗೂ ತೋಟದ ಮಾಲೀಕರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಜನರ ಜೀವಕ್ಕೆ ಅಪಾಯ ಎದುರಾಗಿದೆ. ಇತ್ತೀಚೆಗೆ ಹಾಸನದಲ್ಲೂ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟಿರುವ ಘಟನೆ ಜನರಲ್ಲಿ ಆತಂಕ ಹೆಚ್ಚಿಸಿದೆ. ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More
Next Story