Have you passed 10th, PUC in first class? Apply for the incentive today!
x

ಸಾಂದರ್ಭಿಕ ಚಿತ್ರ

10th, ಪಿಯುಸಿ ಫಸ್ಟ್‌ಕ್ಲಾಸ್‌ನಲ್ಲಿ ಪಾಸ್‌ ಆಗಿದ್ದೀರಾ ? ಪ್ರೋತ್ಸಾಹ ಧನಕ್ಕೆ ಇಂದೇ ಅರ್ಜಿ ಸಲ್ಲಿಸಿ!

ಪಿಯುಸಿ , ಡಿಪ್ಲೋಮಾ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿದಂತೆ ಮೆಟ್ರಿಕ್ ನಂತರದ ಯಾವುದೇ ಕೋರ್ಸ್‌ನಲ್ಲಿ ವ್ಯಾಸಂಗ ಮಾಡಿ 2026-27ನೇ ಶೈಕ್ಷಣಿಕ ವರ್ಷದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿಯೇ ತೇರ್ಗಡೆಯಾಗಿರಬೇಕು.


Click the Play button to hear this message in audio format

ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆರ್ಥಿಕವಾಗಿ ಬೆನ್ನೆಲುಬಾಗಿ ನಿಲ್ಲಲು ಮುಂದಾಗಿದೆ. 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾದ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪಿಯುಸಿ , ಡಿಪ್ಲೋಮಾ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿದಂತೆ ಮೆಟ್ರಿಕ್ ನಂತರದ ಯಾವುದೇ ಕೋರ್ಸ್‌ನಲ್ಲಿ ವ್ಯಾಸಂಗ ಮಾಡಿ 2026-27ನೇ ಶೈಕ್ಷಣಿಕ ವರ್ಷದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿಯೇ ಎಲ್ಲಾ ವಿಷಯಗಳಲ್ಲಿ ತೇರ್ಗಡೆಯಾಗಿರಬೇಕು. ಕಡ್ಡಾಯವಾಗಿ ಪ್ರಥಮ ದರ್ಜೆಯಲ್ಲಿ ಶೇ. 60 ಅಥವಾ ಅದಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ.

ಅರ್ಜಿಗೆ ಅಗತ್ಯವಿರುವ ಪ್ರಮುಖ ದಾಖಲೆಗಳು

ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಥಿಗಳು ಚಾಲ್ತಿಯಲ್ಲಿರುವ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರುವುದನ್ನು ದೃಢೀಕರಿಸುವ ಅಧಿಕೃತ ಅಂಕಪಟ್ಟಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ಮಾನ್ಯತೆ ಇರುವ ಜಾತಿ ಹಾಗೂ ಆದಾಯ ಪ್ರಮಾಣಪತ್ರ, ಪ್ರೋತ್ಸಾಹ ಧನದ ಮೊತ್ತವು ನೇರವಾಗಿ ಫಲಾನುಭವಿಯ ಖಾತೆಗೆ 'ನೇರ ನಗದು ವರ್ಗಾವಣೆ' (DBT) ಮೂಲಕ ಜಮೆಯಾಗುವುದರಿಂದ, ಆಧಾರ್ ಸಂಖ್ಯೆಯೊಂದಿಗೆ ಕಡ್ಡಾಯವಾಗಿ ಲಿಂಕ್ ಆಗಿರುವ ಬ್ಯಾಂಕ್ ಪಾಸ್‌ಬುಕ್ ವಿವರ ಅಗತ್ಯ.

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು ಯಾವುದೇ ಕಚೇರಿಗಳಿಗೆ ಖುದ್ದಾಗಿ ಅಲೆಯುವ ಅಗತ್ಯವಿಲ್ಲ. ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್‌ನಲ್ಲಿ ಇರಲಿದ್ದು, ಇಲಾಖೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅಧಿಕೃತ ಲಿಂಕ್ swdservices.karnataka.gov.in ಅರ್ಜಿ ಸಲ್ಲಿಸಬಹುದು. ತಾಂತ್ರಿಕ ದೋಷಗಳನ್ನು ತಪ್ಪಿಸಲು ಹಾಗೂ ಕೊನೆಯ ದಿನದ ಧಾವಂತದಿಂದ ಪಾರಾಗಲು ವಿದ್ಯಾರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಮನವಿ ಮಾಡಿದೆ.

ಸಹಾಯವಾಣಿ

ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ತೊಂದರೆ ಎದುರಾದರೆ ಅಥವಾ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ವಿದ್ಯಾರ್ಥಿಗಳು ಇಲಾಖೆಯ 24X7 ಲಭ್ಯವಿರುವ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು 94823 00400 ಹಾಗೂ 080-22634300 ಎಕ್ಸ್ (ಟ್ವಿಟರ್) ಖಾತೆ @SWDGok ಗೆ ಮನವಿ ಸಲ್ಲಿಸಬಹುದು ಎಂದು ತಿಳಿಸಿದೆ.

Read More
Next Story