DCET-2026: Final opportunity to submit application correction, new caste certificate
x

ಸಾಂದರ್ಭಿಕ ಚಿತ್ರ

DCET-2026: ಅರ್ಜಿ ತಿದ್ದುಪಡಿ, ಹೊಸ ಜಾತಿ ಪ್ರಮಾಣಪತ್ರ ಸಲ್ಲಿಕೆಗೆ ಅಂತಿಮ ಅವಕಾಶ

ಡಿಸಿಇಟಿ-2026ಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ಸಾಮಾನ್ಯ ಹಾಗೂ ವೃತ್ತಿನಿರತ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮೇ 5ರಿಂದ ಮೇ 20ರ ವರೆಗೆ ಕಾಲಾವಕಾಶ ನೀಡಲಾಗಿದೆ.


Click the Play button to hear this message in audio format

ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಪಡೆಯಲು ಇಚ್ಛಿಸುವ ಡಿಪ್ಲೊಮಾ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಪ್ರಕಟಣೆ ಹೊರಡಿಸಿದೆ. ಡಿಸಿಇಟಿ-2026 ಅರ್ಜಿ ಪ್ರಕ್ರಿಯೆಯಲ್ಲಿನ ತಾಂತ್ರಿಕ ಅಂಶಗಳು ಮತ್ತು ಮೀಸಲಾತಿ ದಾಖಲೆಗಳ ಕುರಿತು ಅಭ್ಯರ್ಥಿಗಳಿಗೆ ಕೊನೆಯ ಅವಕಾಶ ನೀಡಲಾಗಿದೆ.

ಪರಿಶಿಷ್ಟ ಜಾತಿಯಡಿ ಬರುವ ಅಭ್ಯರ್ಥಿಗಳು ಒಳಮೀಸಲಾತಿ ವಿವರಗಳನ್ನು ಒಳಗೊಂಡ ಹೊಸ ಜಾತಿ ಪ್ರಮಾಣ ಪತ್ರದ ಆರ್‌ಡಿ (RD) ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಅನೇಕ ಅಭ್ಯರ್ಥಿಗಳು ಹಳೆಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದ್ದು, ಅಭ್ಯರ್ಥಿಗಳು ತಕ್ಷಣವೇ ತಹಶೀಲ್ದಾರ್‌ರಿಂದ ಪ್ರವರ್ಗ-ಎ, ಪ್ರವರ್ಗ-ಬಿ ಅಥವಾ ಪ್ರವರ್ಗ-ಸಿ ಎಂದು ನಮೂದಾಗಿರುವ ಹೊಸ ಪ್ರಮಾಣ ಪತ್ರ ಪಡೆದು ಮೇ 22ರೊಳಗೆ ಅಪ್‌ಲೋಡ್ ಮಾಡಬೇಕು ಎಂದು ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಪ್ರಕಟಣೆ


ಅರ್ಜಿ ತಿದ್ದುಪಡಿಗೆ ಅವಕಾಶ

ಡಿಸಿಇಟಿ-2026ಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ಸಾಮಾನ್ಯ ಹಾಗೂ ವೃತ್ತಿನಿರತ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮೇ 5ರಿಂದ ಮೇ 20ರ ವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಲಾಗಿನ್ ಆಗಿ ತಮ್ಮ ಮಾಹಿತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ 'ಫೈನಲ್ ಸಬ್ಮಿಟ್' ನೀಡಲು ಸೂಚಿಸಲಾಗಿದೆ.

ಆರ್‌ಡಿ ಸಂಖ್ಯೆ ನಮೂದು ಕಡ್ಡಾಯ

ಎನ್‌ಸಿಸಿ, ಕ್ರೀಡೆ ಅಥವಾ ಮಾಜಿ ಸೈನಿಕ ಕೋಟಾದಡಿ ಸೌಲಭ್ಯ ಪಡೆಯುವವರು ಅರ್ಜಿಯಲ್ಲಿ ಸರಿಯಾಗಿ ಕ್ಲೈಮ್ ಮಾಡಿದ್ದಾರೆಯೇ ಎಂದು ಪರಿಶೀಲಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರದ ಜತೆಗೆ ಶುಲ್ಕ ವಿನಾಯಿತಿ ಪಡೆಯಲು ವರಮಾನ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಇಲ್ಲದಿದ್ದಲ್ಲಿ ಪೂರ್ಣ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸೂಚನೆ ನೀಡಿದೆ.

ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳು ಅರ್ಜಿಯಲ್ಲಿ ಮೀಸಲಾತಿಯನ್ನು ಸರಿಯಾಗಿ ಗುರುತಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಹೈದರಾಬಾದ್‌ ಕರ್ನಾಟಕ (371J) ಮೀಸಲಾತಿ ಕೋರುವವರು ಸಂಬಂಧಿತ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆಯನ್ನು ನಮೂದಿಸಿರಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌. ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
Next Story