Good news for SSLC students: Free travel on government buses!
x

ಸಾಂದರ್ಭಿಕ ಚಿತ್ರ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ!

ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೆಎಸ್‌ಆರ್‌ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


Click the Play button to hear this message in audio format

ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಬೋರ್ಡ್ ಪರೀಕ್ಷೆಗಳನ್ನು ಬರೆಯಲು ಸಿದ್ಧವಾಗಿರುವ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಂದು ಹಾಲ್ ಟಿಕೆಟ್ (ಪ್ರವೇಶ ಪತ್ರ) ಹೊಂದಿರುವ ಎಲ್ಲಾ ಪರೀಕ್ಷಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಿದೆ.

ಈ ಕುರಿತು ತನ್ನ ಪ್ರಕಟಣೆಯಲ್ಲಿ ತಿಳಿಸಿರುವ ಕೆಎಸ್‌ಆರ್‌ಟಿಸಿ, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾ. 18 ರಿಂದ ಏ. 2ರವರೆಗೆ ನಡೆಯಲಿದ್ದು, ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, "ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು" ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೋರಿದೆ.

ನೆನಪಿಡಬೇಕಾದ ಅಂಶಗಳು

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರವನ್ನು ಕೊಂಡೊಯ್ಯಲು ಮರೆಯಬೇಡಿ. ಪರೀಕ್ಷೆ ಆರಂಭವಾಗುವ ಕನಿಷ್ಠ 30 ರಿಂದ 45 ನಿಮಿಷಗಳ ಮೊದಲೇ ಪರೀಕ್ಷಾ ಕೇಂದ್ರದಲ್ಲಿರುವುದು ಉತ್ತಮ. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ ಎಂಬುದು ನೆನಪಿನಲ್ಲಿರಲಿ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ

* ಮಾರ್ಚ್ 18 - ಪ್ರಥಮ ಭಾಷೆ

* ಮಾರ್ಚ್ 23 - ವಿಜ್ಞಾನ

* ಮಾರ್ಚ್ 25 - ದ್ವಿತೀಯ ಭಾಷೆ

* ಮಾರ್ಚ್ 28 - ಗಣಿತ

* ಮಾರ್ಚ್ 30 - ತೃತೀಯ ಭಾಷೆ

* ಏಪ್ರಿಲ್‌ 2 - ಸಮಾಜ ವಿಜ್ಞಾನ

Read More
Next Story