x

CBSE ವಿದ್ಯಾರ್ಥಿಗಳೇ ಗಮನಿಸಿ: ಇನ್ಮುಂದೆ 3ನೇ ಭಾಷೆಯಲ್ಲೂ ಪಾಸ್ ಆಗಲೇಬೇಕು

ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನ್ವಯ ಸಿಬಿಎಸ್‌ಇ ಹೊಸ ನಿಯಮ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹೊಸ ತ್ರಿಭಾಷಾ ನೀತಿಯನ್ನು ಜಾರಿಗೆ ತಂದಿದೆ.


Click the Play button to hear this message in audio format

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಯಮವೊಂದನ್ನು ಜಾರಿಗೆ ತಂದಿದ್ದು, ಹೊಸ ತ್ರಿಭಾಷಾ ನೀತಿಯಡಿಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಮೂರನೇ ಭಾಷೆಯ ಮೌಲ್ಯಮಾಪನದಲ್ಲಿ ಕಡ್ಡಾಯ ತೇರ್ಗಡೆಯಾಗಬೇಕಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸುಗಳಿಗೆ ಅನುಗುಣವಾಗಿ ಶೈಕ್ಷಣಿಕ ಚೌಕಟ್ಟನ್ನು ಬಲಪಡಿಸಲು ಸಿಬಿಎಸ್‌ಇ ಈ ಕ್ರಮ ಕೈಗೊಂಡಿದೆ. ಹೊಸ ನಿಯಮಾವಳಿಗಳ ಪ್ರಕಾರ, ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಭಾಷಾ ಕೌಶಲ್ಯ ಮತ್ತು ಸಾಂಸ್ಕೃತಿಕ ಜ್ಞಾನವನ್ನು ವಿಸ್ತರಿಸಿಕೊಳ್ಳುವ ಉದ್ದೇಶದಿಂದ ಈ ಮೂರನೇ ಭಾಷೆಯ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

Read More
Next Story