Yash Interview |ಹಾಲಿವುಡ್‌ ಸಂದರ್ಶನದಲ್ಲಿ ರಾಕಿ ಭಾಯ್‌! ಟಾಕ್ಸಿಕ್‌, ರಾಮಾಯಣದ ಬಗ್ಗೆ ಯಶ್‌ ಅಪ್ಡೇಟ್ಸ್‌
x

ಸಿನಿಮಾಕಾನ್ 2026ರಲ್ಲಿ ರಾಕಿಂಗ್ ಸ್ಟಾರ್ ಯಶ್

Yash Interview |ಹಾಲಿವುಡ್‌ ಸಂದರ್ಶನದಲ್ಲಿ ರಾಕಿ ಭಾಯ್‌! ಟಾಕ್ಸಿಕ್‌, ರಾಮಾಯಣದ ಬಗ್ಗೆ ಯಶ್‌ ಅಪ್ಡೇಟ್ಸ್‌

ನಟ ಯಶ್ ಸಿನಿಮಾಕಾನ್ 2026ರಲ್ಲಿ ರಾಮಾಯಣದ ರಾವಣನಾಗಿ ಕಾಣಿಸಿಕೊಂಡಿದ್ದಾರೆ. ಟಾಕ್ಸಿಕ್ ಸಿನಿಮಾ ಬಿಡುಗಡೆ ದಿನಾಂಕ ಮತ್ತು ಚಿತ್ರದ ವಿಶೇಷತೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.


Click the Play button to hear this message in audio format

ನಟ ಯಶ್ ಇತ್ತೀಚೆಗೆ ಲಾಸ್ ಏಂಜಲೀಸ್‌ನಲ್ಲಿ ನಡೆದ ಪ್ರತಿಷ್ಠಿತ ‘ಸಿನಿಮಾಕಾನ್ 2026’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ತಮ್ಮ ವೃತ್ತಿಜೀವನದ ಮೊದಲ ಹಾಲಿವುಡ್ ಸಂದರ್ಶನವನ್ನು ನೀಡಿದ್ದಾರೆ. ಈ ವೇಳೆ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರೊಂದಿಗೆ ಕಾಣಿಸಿಕೊಂಡ ಯಶ್, ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಸಿನಿಮಾಕಾನ್ ಕಾರ್ಯಕ್ರಮದಲ್ಲಿ ಯಶ್ ಅವರ ಸ್ಟೈಲಿಶ್ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ನೀಲಿ ಬಣ್ಣದ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ, ತಮ್ಮ ಸಿಗ್ನೇಚರ್ ಗಡ್ಡದ ಲುಕ್‌ನಲ್ಲಿ ಯಶ್‌ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದಲ್ಲಿ ಬಳಸಲಾದ ಎನ್ನಲಾದ ಚಿನ್ನದ ಕವಚದ ಪಕ್ಕದಲ್ಲಿ ಯಶ್ ನಿಂತಿರುವ ಫೋಟೋವೊಂದು ವೈರಲ್ ಆಗುತ್ತಿದೆ. 'ದಿ ಒಡಿಸ್ಸಿ', 'ಡ್ಯೂನ್: ಪಾರ್ಟ್ 3' ಮತ್ತು 'ಅವೆಂಜರ್ಸ್: ಡೂಮ್ಸ್‌ಡೇ' ನಂತಹ ಹಾಲಿವುಡ್ ಸಿನಿಮಾಗಳ ನಡುವೆ ರಣಬೀರ್ ಕಪೂರ್ ರಾಮನಾಗಿ ಮತ್ತು ಯಶ್ ರಾವಣನಾಗಿ ಕಾಣಿಸಿಕೊಂಡಿರುವ ಪೋಸ್ಟರ್‌ಗಳು ಪ್ರದರ್ಶನಗೊಂಡಿದೆ.

ಯಶ್ ಅವರು ‘ರಾಮಾಯಣ’ ಸಿನಿಮಾದಲ್ಲಿ ಕೇವಲ ನಟನಾಗಿ ಮಾತ್ರವಲ್ಲದೆ ಸಹ-ನಿರ್ಮಾಪಕರಾಗಿಯೂ ಕೆಲಸ ಮಾಡುತ್ತಿದ್ದು, ಇದರಲ್ಲಿ ಅವರು ರಾವಣನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಣ್​​ಬೀರ್ ಕಪೂರ್ ರಾಮನಾಗಿ ಮತ್ತು ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿದ್ದು, ಸಿನಿಮಾ ಇದೇ ವರ್ಷ ನವೆಂಬರ್‌ನಲ್ಲಿ ತೆರೆಕಾಣುವ ಸಾಧ್ಯತೆಯಿದೆ.

ಕೇವಲ 'ರಾಮಾಯಣ' ಮಾತ್ರವಲ್ಲದೆ, ಯಶ್ ತಮ್ಮ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರದ ಬಗ್ಗೆಯೂ ಕೆಲವು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಗ್ಯಾಂಗ್‌ಸ್ಟರ್ ಡ್ರಾಮಾವು ಈ ಹಿಂದೆ ರಣವೀರ್ ಸಿಂಗ್ ಅವರ 'ಧುರಂಧರ್' ಚಿತ್ರದೊಂದಿಗೆ ತೆರೆಕಾಣಬೇಕಿತ್ತು. ಆದರೆ ಜಾಗತಿಕ ಸಂಘರ್ಷಗಳ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ಮುಂದೂಡಲು ಚಿತ್ರತಂಡ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಜೂನ್ 4ಕ್ಕೆ ಬಿಡುಗಡೆಯಾಗಲು ಸಿದ್ಧವಾಗಿದ್ದು, ಈ ಚಿತ್ರವನ್ನು ಇಂಗ್ಲಿಷ್ ಭಾಷೆಯಲ್ಲೂ ಚಿತ್ರೀಕರಿಸುವ ಮೂಲಕ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಯಶ್ ಯೋಜಿಸಿದ್ದಾರೆ. ಗೋವಾದ ಹಿನ್ನೆಲೆಯಲ್ಲಿ 1940 ರಿಂದ 1970 ರ ಕಾಲಘಟ್ಟದ ಕಥೆಯನ್ನು ಹೊಂದಿರುವ 'ಟಾಕ್ಸಿಕ್' ಚಿತ್ರದಲ್ಲಿ ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಅವರಂತಹ ದೊಡ್ಡ ತಾರಾಗಣವಿದೆ. ಈ ಹಿಂದೆ ಮಾರ್ಚ್ 19 ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರವು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಜೂನ್ 4, ಕ್ಕೆ ಮುಂದೂಡಲ್ಪಟ್ಟಿದೆ.

Read More
Next Story