Thalapathy Vijay| ದಳಪತಿ ವಿಜಯ್-ಸಂಗೀತಾ ವಿಚ್ಛೇದನ ವಿಚಾರಣೆ ಜೂನ್ 15ಕ್ಕೆ ಮುಂದೂಡಿಕೆ
x

ದಳಪತಿ ವಿಜಯ್ ಮತ್ತು ಸಂಗೀತಾ ವಿಚ್ಛೇದನ ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ನ್ಯಾಯಾಲಯ ಜೂನ್ 15ಕ್ಕೆ ಮುಂದೂಡಿದೆ.

Thalapathy Vijay| ದಳಪತಿ ವಿಜಯ್-ಸಂಗೀತಾ ವಿಚ್ಛೇದನ ವಿಚಾರಣೆ ಜೂನ್ 15ಕ್ಕೆ ಮುಂದೂಡಿಕೆ

ನಟ ದಳಪತಿ ವಿಜಯ್ ಮತ್ತು ಸಂಗೀತಾ ಅವರ ವಿಚ್ಛೇದನ ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ಜೂನ್ 15ಕ್ಕೆ ಮುಂದೂಡಿದೆ.


Click the Play button to hear this message in audio format

ನಟ ದಳಪತಿ ವಿಜಯ್ ಮತ್ತು ಸಂಗೀತಾ ದಂಪತಿಯ ವಿಚ್ಛೇದನ ಪ್ರಕರಣದ ವಿಚಾರಣೆಯನ್ನು ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ಜೂನ್ 15ಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಿದೆ. ಸೋಮವಾರ ನ್ಯಾಯಾಧೀಶರಾದ ಶಶಿಕಲಾ ಅವರ ಮುಂದೆ ಈ ಪ್ರಕರಣವು ವಿಚಾರಣೆಗೆ ಬಂದಿದ್ದು, ಅಲ್ಪಾವಧಿಯ ಚರ್ಚೆಯ ನಂತರ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.

25 ವರ್ಷಗಳ ಸುದೀರ್ಘ ವೈವಾಹಿಕ ಜೀವನದ ನಂತರ ಸಂಗೀತಾ ಅವರು ಫೆಬ್ರವರಿ 2026 ರಲ್ಲಿ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿಂದೆ ಏಪ್ರಿಲ್ 20 ರಂದು ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತಾದರೂ, ಇದೀಗ ಎರಡನೇ ಬಾರಿಗೆ ಪ್ರಕರಣವನ್ನು ಮುಂದೂಡಲಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೇವಲ ಮೂರು ದಿನಗಳ ಮೊದಲು ಈ ಬೆಳವಣಿಗೆ ನಡೆದಿದ್ದು, ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸಂಗೀತಾ ಅವರು ಸಲ್ಲಿಸಿರುವ ಅರ್ಜಿಯಲ್ಲಿ ವಿಜಯ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. 2021 ರಿಂದ ವಿಜಯ್ ನಟಿಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅವರು ದೂರಿದ್ದಾರೆ. ಈ ವಿಚಾರವು ತಮಗೆ ತೀವ್ರ ಮಾನಸಿಕ ವೇದನೆ ಮತ್ತು ನಂಬಿಕೆ ದ್ರೋಹವನ್ನು ಉಂಟು ಮಾಡಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ವಿಜಯ್ ಅವರು ಆ ನಟಿಯೊಂದಿಗೆ ಸಾರ್ವಜನಿಕವಾಗಿ ಮತ್ತು ವಿದೇಶಿ ಪ್ರವಾಸಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ತಮ್ಮ ಕುಟುಂಬ ಮತ್ತು ಮಕ್ಕಳಿಗೆ ಮುಜುಗರ ತರುತ್ತಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

1999 ರ ಆಗಸ್ಟ್‌ನಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದ ಈ ಜೋಡಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಸಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ವಿಜಯ್ ಅವರು ತಮ್ಮಿಂದ ಮಾನಸಿಕವಾಗಿ ದೂರವಾಗಿದ್ದು, ಮನೆಯಲ್ಲೇ ಪ್ರತ್ಯೇಕವಾಗಿ ವಾಸಿಸುವಂತೆ ಪರಿಸ್ಥಿತಿ ನಿರ್ಮಿಸಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದರು.

ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ, ವಿಜಯ್ ಮತ್ತು ನಟಿ ತ್ರಿಷಾ ಕೃಷ್ಣನ್ ನಡುವಿನ ಸಂಬಂಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಈ ವದಂತಿಗಳಿಗೆ ಪುಷ್ಟಿ ನೀಡುವಂತೆ ಇತ್ತೀಚೆಗೆ ನಡೆದ ವಿವಾಹ ಆರತಕ್ಷತೆ ಕಾರ್ಯಕ್ರಮವೊಂದಕ್ಕೆ ಈ ಇಬ್ಬರೂ ತಾರೆಯರು ಒಂದೇ ಕಾರಿನಲ್ಲಿ ಆಗಮಿಸಿದ್ದರು.

ಸಂಗೀತಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ, ವಿಜಯ್ ಅವರು ನಟಿಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ಯಾವುದೇ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಇತ್ತೀಚಿನ ದಿನಗಳಲ್ಲಿ ವಿಜಯ್ ಮತ್ತು ತ್ರಿಷಾ ಅವರು ಸಾರ್ವಜನಿಕ ಸಮಾರಂಭಗಳಲ್ಲಿ ಮತ್ತು ವಿದೇಶಿ ಪ್ರವಾಸಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ನಡುವೆ ಹೊಸ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ವಿಶೇಷವಾಗಿ 'ಲಿಯೋ' ಚಿತ್ರದ ನಂತರ ಈ ಜೋಡಿಯ ಬಗ್ಗೆ ವದಂತಿಗಳು ಹಬ್ಬಲು ಶುರುವಾಗಿದ್ದವು.

Read More
Next Story