ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ರಕ್ತಸಿಕ್ತ ಲುಕ್‌ನಲ್ಲಿ ಯಶ್ ಮಿಂಚು
x

ಆಗಸ್ಟ್ 26ರಂದು ಬಿಡುಗಡೆಯಾಗಲಿರುವ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ

'ಟಾಕ್ಸಿಕ್' ಹೊಸ ಪೋಸ್ಟರ್ ರಿಲೀಸ್; ರಕ್ತಸಿಕ್ತ ಲುಕ್‌ನಲ್ಲಿ ಯಶ್ ಮಿಂಚು

ಆಗಸ್ಟ್ 26ರಂದು ಬಿಡುಗಡೆಯಾಗಲಿರುವ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ರಕ್ತಸಿಕ್ತ ಲುಕ್‌ನಲ್ಲಿ ಕಾಣಿಸಿಕೊಂಡ ಯಶ್ ಹೊಸ ಸಂಚಲನ ಮೂಡಿಸಿದ್ದಾರೆ.


ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 26ರಂದು ಸಿನಿಮಾ ತೆರೆಗೆ ಬರಲಿದ್ದು, ಈ ಹಿನ್ನೆಲೆ ಚಿತ್ರತಂಡ ಯಶ್ ಅವರ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.

ಹೊಸ ಪೋಸ್ಟರ್‌ನಲ್ಲಿ ಯಶ್ ರಕ್ತಸಿಕ್ತ ಕೈಗಳೊಂದಿಗೆ ಸಿಗಾರ್ ಹಾಗೂ ಸಿಗರೇಟ್ ಸೇದುತ್ತಿರುವ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಕಥೆಯ ಬಗ್ಗೆ ಯಾವುದೇ ಸುಳಿವು ನೀಡದೇ, ಪೋಸ್ಟರ್ ಮೂಲಕವೇ ಕುತೂಹಲ ಮತ್ತು ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ.

ನಿರ್ದೇಶಕಿ ಗೀತು ಮೋಹನದಾಸ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಆ್ಯಕ್ಷನ್ ಎಂಟರ್‌ಟೈನರ್‌ನಲ್ಲಿ ನಯನತಾರಾ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಹಾಗೂ ಹುಮಾ ಖುರೇಷಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ಅದ್ಧೂರಿ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ.

ಈಗಾಗಲೇ ಬಿಡುಗಡೆಯಾಗಿರುವ 'ತಬಾಹಿ' ಮತ್ತು 'ಮಧೋಶ್' ಹಾಡುಗಳು ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ ಪಡೆದಿದ್ದು, ಚಿತ್ರದ ಟೀಸರ್ ಹಾಗೂ ಪ್ರಚಾರ ಸಾಮಗ್ರಿಗಳು ಕೂಡ ಸಿನಿಪ್ರಿಯರ ಗಮನ ಸೆಳೆದಿವೆ. ಹೊಸ ಪೋಸ್ಟರ್ ಬಿಡುಗಡೆಯಾದ ಬಳಿಕ 'ಟಾಕ್ಸಿಕ್' ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿದ್ದು, ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಸಾಧಿಸುವ ವಿಶ್ವಾಸವನ್ನು ಚಿತ್ರತಂಡ ಹೊಂದಿದೆ.

Read More
Next Story