
ಜನ ನಾಯಗನ್ ಸಿನಿಮಾ ಜುಲೈ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.
30ಕ್ಕೂ ಹೆಚ್ಚು ದೇಶಗಳಲ್ಲಿ 'ಜನ ನಾಯಗನ್' ಬಿಡುಗಡೆ; ಭಾನುವಾರ ಟಿಕೆಟ್ ಬುಕ್ಕಿಂಗ್ ಆರಂಭ
ಜನ ನಾಯಗನ್ ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್ ತಮಿಳುನಾಡಿನಲ್ಲಿ ಭಾನುವಾರದಿಂದ ಆರಂಭವಾಗಲಿದೆ.
ತಮಿಳುನಾಡು ಮುಖ್ಯಮಂತ್ರಿ, ತಮಿಳು ಚಿತ್ರರಂಗದ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಜುಲೈ 24ರಂದು ವಿಶ್ವದ 30ಕ್ಕೂ ಹೆಚ್ಚು ದೇಶಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ವಿಜಯ್ ಅವರ ಸಿನಿ ಬದುಕಿನ ಕೊನೆಯ ಚಿತ್ರವೆಂದು ಹೇಳಲಾಗುತ್ತಿರುವ ಕಾರಣ, ಚಿತ್ರದ ಮೇಲಿನ ನಿರೀಕ್ಷೆ ಅಭಿಮಾನಿಗಳಲ್ಲಿ ಮತ್ತಷ್ಟು ಹೆಚ್ಚಾಗಿದೆ.
ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್ ತಮಿಳುನಾಡಿನಲ್ಲಿ ಭಾನುವಾರದಿಂದ ಆರಂಭವಾಗಲಿದೆ. ಮೊದಲ ದಿನದ ಮೊದಲ ಪ್ರದರ್ಶನ (FDFS) ಟಿಕೆಟ್‌ಗಳನ್ನು ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ವಿಶೇಷ ಪ್ರದರ್ಶನಗಳಿಗೂ ಸಿದ್ಧತೆಗಳು ನಡೆಯುತ್ತಿವೆ.
ಎಚ್. ವಿನೋತ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಅಭಿನಯಿಸಿದ್ದು, ಬಾಬಿ ಡಿಯೋಲ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಾಮಿತಾ ಬೈಜು, ಪ್ರಕಾಶ್ ರಾಜ್, ಗೌತಮ್ ವಾಸುದೇವ್ ಮೆನನ್ ಸೇರಿದಂತೆ ಹಲವು ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಂಡಿರುವ ಚಿತ್ರದ ಬಿಡುಗಡೆಗೆ ನಿರ್ಮಾಪಕರು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಭಾರತ ಮಾತ್ರವಲ್ಲದೆ ಉತ್ತರ ಅಮೆರಿಕಾ, ಯುರೋಪ್, ಮಧ್ಯಪ್ರಾಚ್ಯ, ಆಸ್ಟ್ರೇಲಿಯಾ ಸೇರಿದಂತೆ 30ಕ್ಕೂ ಹೆಚ್ಚು ದೇಶಗಳಲ್ಲಿ ಏಕಕಾಲಕ್ಕೆ ಸಿನಿಮಾ ಬಿಡುಗಡೆಯಾಗಲಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ನಿರೀಕ್ಷೆ ವ್ಯಕ್ತವಾಗಿದೆ.

