ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಾಯಿ ಧರಮ್ ತೇಜ್
ತೆಲುಗು ನಟ ಸಾಯಿ ಧರಮ್ ತೇಜ್ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಭಿಮಾನಿಗಳೊಂದಿಗೆ ಫೋಟೋಗೆ ಪೋಸ್ ನೀಡಿದರು.
ಆಂಧ್ರಪ್ರದೇಶದ ತಿರುಪತಿಯಲ್ಲಿ ಖ್ಯಾತ ತೆಲುಗು ನಟ ಸಾಯಿ ಧರಮ್ ತೇಜ್ ಅವರು ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ, ಶ್ರೀನಿವಾಸನ ಆಶೀರ್ವಾದ ಪಡೆದರು. ದರ್ಶನದ ಬಳಿಕ ದೇವಸ್ಥಾನದಿಂದ ಹೊರಬರುವಾಗ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ಅಭಿಮಾನಿಗಳು ಸಾಯಿ ಧರಮ್ ತೇಜ್ ಅವರೊಂದಿಗೆ ಛಾಯಾಚಿತ್ರ ತೆಗೆಸಿಕೊಳ್ಳಲು ಮುಂದಾದರು. ಅಭಿಮಾನಿಗಳ ಮನವಿಗೆ ಸ್ಪಂದಿಸಿದ ನಟ ಕೆಲಕಾಲ ಫೋಟೋಗೆ ಪೋಸ್ ನೀಡಿದರು. ತಿರುಮಲದಲ್ಲಿ ಸಾಯಿ ಧರಮ್ ತೇಜ್ ಅವರ ಭೇಟಿಗೆ ಸಂಬಂಧಿಸಿದ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.
Next Story

