
ರಾಘವೇಂದ್ರ ಅವರ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಪಿ.ಸಿ.ಶೇಖರ್ ನಿರ್ದೇಶನದ "ಮಹಾನ್" ಚಿತ್ರತಂಡವು ವಿಶೇಷ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಶುಭಾಶಯ ಕೋರಿದೆ.
ನಟ ವಿಜಯ್ ರಾಘವೇಂದ್ರ ಹುಟ್ಟುಹಬ್ಬ: 'ಮಹಾನ್' ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ
ನಟ ವಿಜಯ್ ರಾಘವೇಂದ್ರ ಅವರ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಪಿ.ಸಿ.ಶೇಖರ್ ನಿರ್ದೇಶನದ "ಮಹಾನ್" ಚಿತ್ರತಂಡವು ವಿಶೇಷ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಶುಭಾಶಯ ಕೋರಿದೆ.
ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭವನ್ನು ಮತ್ತಷ್ಟು ಅರ್ಥಪೂರ್ಣವಾಗಿಸಲು, ಅವರು ನಾಯಕರಾಗಿ ನಟಿಸುತ್ತಿರುವ `ಮಹಾನ್' ಚಿತ್ರತಂಡವು ಚಿತ್ರದ ವಿಶೇಷ ಲುಕ್ ಬಿಡುಗಡೆ ಮಾಡುವ ಮೂಲಕ ನಾಯಕನಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದೆ.
ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ಅತ್ಯಂತ ಅದ್ಧೂರಿಯಾಗಿ ಹಾಗೂ ಯಾವುದೇ ಕೊರತೆಯಾಗದಂತೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಜನಪ್ರಿಯ ನಿರ್ದೇಶಕ ಪಿ.ಸಿ.ಶೇಖರ್ ಅವರ ನಿರ್ದೇಶನದ 11ನೇ ಚಿತ್ರ ಇದಾಗಿದೆ.
ಆರಂಭದಿಂದಲೂ ಚಿತ್ರಪ್ರೇಮಿಗಳಲ್ಲಿ ತೀವ್ರ ಕುತೂಹಲ ಮೂಡಿಸಿರುವ ಈ ಸಿನಿಮಾವು ಸಂಪೂರ್ಣವಾಗಿ ರೈತರ ಜೀವನಾಧಾರಿತ ಕಥಾಹಂದರವನ್ನು ಹೊಂದಿದೆ. ಸದಾ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ವಿಜಯ ರಾಘವೇಂದ್ರ ಅವರು ಈ ಚಿತ್ರದಲ್ಲಿ ನೇರ ಸಮಾಜಮುಖಿಯಾದ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.
ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು, ವಿಜಯ ರಾಘವೇಂದ್ರ ಅವರಿಗೆ ಜೋಡಿಯಾಗಿ ರಾಧಿಕಾ ನಾರಾಯಣ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪ್ರಮುಖ ಪಾತ್ರಗಳಲ್ಲಿ ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ ಹಾಗೂ ಕಿರಣ್ ಶ್ರೀನಿವಾಸ್ ಮುಂತಾದ ನುರಿತ ಕಲಾವಿದರು ಬಣ್ಣ ಹಚ್ಚಿದ್ದಾರೆ. ವಿಭಿನ್ನ ಲುಕ್ ಹಾಗೂ ಪೋಸ್ಟರ್ ಮೂಲಕ ಸದ್ಯ ಗಾಂಧಿನಗರದಲ್ಲಿ ಭಾರಿ ಸದ್ದು ಮಾಡುತ್ತಿರುವ "ಮಹಾನ್" ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ

