Toxic | ಟಾಕ್ಸಿಕ್ ಸಿನಿಮಾದ ಬೋಲ್ಡ್ ದೃಶ್ಯಗಳ ವದಂತಿಗೆ ನಟಿ ಕಿಯಾರಾ ಅಡ್ವಾಣಿ ಕಿಡಿ
x

ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದಲ್ಲಿನ ಬೋಲ್ಡ್ ದೃಶ್ಯಗಳನ್ನು ಕತ್ತರಿಸುವಂತೆ ಮನವಿ ಮಾಡಿದ್ದಾರೆ.

Toxic | ಟಾಕ್ಸಿಕ್ ಸಿನಿಮಾದ ಬೋಲ್ಡ್ ದೃಶ್ಯಗಳ ವದಂತಿಗೆ ನಟಿ ಕಿಯಾರಾ ಅಡ್ವಾಣಿ ಕಿಡಿ

ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದಲ್ಲಿನ ಬೋಲ್ಡ್ ದೃಶ್ಯಗಳನ್ನು ಕತ್ತರಿಸುವಂತೆ ಮನವಿ ಮಾಡಿದ್ದಾರೆ ಎಂಬ ವದಂತಿಯನ್ನು 'ಅಪ್ಪಟ ಸುಳ್ಳು' ಎಂದು ಸ್ಪಷ್ಟಪಡಿಸಿದ್ದಾರೆ.


Click the Play button to hear this message in audio format

ಖ್ಯಾತ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ 'ಟಾಕ್ಸಿಕ್'ನಲ್ಲಿನ ಕೆಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಕೇಳಿಕೊಂಡಿದ್ದಾರೆ ಎಂಬ ಸುದ್ದಿಯನ್ನು ಖಡಾಖಂಡಿತವಾಗಿ ನಿರಾಕರಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕಿಯಾರಾ ಅಡ್ವಾಣಿ ಅವರು ನಟ ಯಶ್ ಜೊತೆಗಿನ ಕೆಲವು ಬೋಲ್ಡ್ ಹಾಗೂ ಅತಿರೇಕದ ದೃಶ್ಯಗಳನ್ನು ಕಡಿತಗೊಳಿಸುವಂತೆ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ, ಇವೆಲ್ಲವೂ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವರದಿಯ ಸ್ಕ್ರೀನ್‌ಶಾಟ್ ಹಂಚಿಕೊಂಡಿರುವ ಕಿಯಾರಾ, ಅದರ ಮೇಲೆ "ಸಂಪೂರ್ಣ ಸುಳ್ಳು" ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಚಿತ್ರದ ದೃಶ್ಯಗಳ ಬಗ್ಗೆ ತಮಗೆ ಯಾವುದೇ ಅಸಮಾಧಾನವಿಲ್ಲ ಮತ್ತು ಇಂತಹ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ.

ಕಿಯಾರಾ ಅವರ ಈ ಸ್ಪಷ್ಟನೆಯಿಂದ ಅಭಿಮಾನಿಗಳಲ್ಲಿ ಉಂಟಾಗಿದ್ದ ಗೊಂದಲ ನಿವಾರಣೆಯಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ನಯನತಾರಾ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರಂತಹ ಘಟಾನುಘಟಿ ಕಲಾವಿದರು ಬಣ್ಣ ಹಚ್ಚುತ್ತಿದ್ದಾರೆ.

ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರವು ಸದ್ಯ ಚಿತ್ರೀಕರಣದ ಹಂತದಲ್ಲಿದ್ದು, ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಯನತಾರಾ, ಹುಮಾ ಖುರೇಷಿ ಸೇರಿದಂತೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಇತ್ತೀಚೆಗಷ್ಟೇ ಚಿತ್ರತಂಡವು ಸಿನಿಮಾದ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದು, ಜಾಗತಿಕ ಮಟ್ಟದಲ್ಲಿ ಚಿತ್ರವನ್ನು ಅದ್ಧೂರಿಯಾಗಿ ತೆರೆಗೆ ತರಲು ಸಿದ್ಧತೆ ನಡೆಸುತ್ತಿದೆ. ಸದ್ಯಕ್ಕೆ ಈ ಸಿನಿಮಾ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದ್ದು, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಆಗಿ ಬಿಡುಗಡೆಯಾಗಲಿದೆ.

Read More
Next Story