
ಸಿನೆಮಾಕಾನ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಚಿತ್ರದ ಅಧಿಕೃತ ಪ್ರಿವ್ಯೂ ಪ್ರದರ್ಶನವಾಗಿದ್ದು, 2026ರ ಜೂನ್ 4ಕ್ಕೆ ಜಾಗತಿಕ ಬಿಡುಗಡೆ ನಿಗದಿಯಾಗಿದೆ.
Toxic movie Yash| ಯಶ್ 'ಟಾಕ್ಸಿಕ್' ಚಿತ್ರಕ್ಕೆ ಹಾಲಿವುಡ್ ಸಾಹಸ ನಿರ್ದೇಶಕ ಜೆ.ಜೆ. ಪೆರ್ರಿ ಫಿದಾ
ಹಾಲಿವುಡ್ ನಿರ್ದೇಶಕ ಜೆ.ಜೆ. ಪೆರ್ರಿ ಯಶ್ ಅವರ 'ಟಾಕ್ಸಿಕ್' ಚಿತ್ರತಂಡವನ್ನು ಶ್ಲಾಘಿಸಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಸಿನಿಮಾ 2026ರ ಜೂನ್‌ನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಖ್ಯಾತ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆ.ಜೆ. ಪೆರ್ರಿ ಅವರು 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೌನ್ ಅಪ್ಸ್' ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಮತ್ತು ನಿರ್ದೇಶಕಿ ಗೀತು ಮೋಹನ್ ದಾಸ್ ಅವರೊಂದಿಗೆ ಕೆಲಸ ಮಾಡಿದ ಅನುಭವವನ್ನು ಶ್ಲಾಘಿಸಿದ್ದಾರೆ.
ಈ ಕುರಿತು ಸಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಯಶ್ ಅವರನ್ನು ಅತ್ಯಂತ ಪ್ರತಿಭಾವಂತ ನಟ ಮತ್ತು ಅದ್ಭುತ ವ್ಯಕ್ತಿ ಎಂದು ಬಣ್ಣಿಸಿದ್ದು, ಚಿತ್ರತಂಡದ ಶಿಸ್ತು ಮತ್ತು ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜೆ.ಜೆ. ಪೆರ್ರಿ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ನಿರ್ದೇಶಕಿ ಗೀತು ಮೋಹನ್ ದಾಸ್, ಈ ಸಹಯೋಗವು ಅತ್ಯಂತ ವಿಶೇಷವಾದುದು ಮತ್ತು ತೆರೆಯ ಮೇಲೆ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಹಾಲಿವುಡ್ ತಂತ್ರಜ್ಞರ ಕೆಲಸದ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ ಮತ್ತು ಹುಮಾ ಖುರೇಷಿ ಪ್ರಮುಖ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಲಲಿತ್ ವೇಗಾಸ್‌ನಲ್ಲಿ ನಡೆದ ಸಿನಿಮಾಕಾನ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಯಶ್, ಈ ಚಿತ್ರವು ಅಂತರಾಷ್ಟ್ರೀಯ ಮಟ್ಟದ ಸಾಹಸ ದೃಶ್ಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಪ್ರತಿ ಸನ್ನಿವೇಶದಲ್ಲೂ ಹೊಸತನವನ್ನು ಅನುಭವಿಸಲಿದ್ದಾರೆ ಎಂದು ತಿಳಿಸಿದ್ದರು.
ಬೃಹತ್ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ 'ಟಾಕ್ಸಿಕ್' ಸಿನಿಮಾವು ಜೂನ್ 4ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗುತ್ತಿದೆ.
ಜೂನ್ 4 ರಂದು ಈ ಚಿತ್ರವು ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆಯಾಗಲಿದ್ದು, ಇಂಗ್ಲಿಷ್ ಸೇರಿದಂತೆ ಭಾರತದ ಪ್ರಮುಖ ಭಾಷೆಗಳಲ್ಲಿ ಅಭಿಮಾನಿಗಳ ಮುಂದೆ ಬರಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಮತ್ತಷ್ಟು ರೋಚಕ ಅಪ್‌ಡೇಟ್‌ಗಳನ್ನು ನೀಡುವುದಾಗಿ ಯಶ್ ಭರವಸೆ ನೀಡಿದ್ದು, ಪ್ರಸ್ತುತ ಈ ಸುದ್ದಿ ಗಾಂಧಿನಗರದಿಂದ ಹಾಲಿವುಡ್‌ವರೆಗೂ ಭಾರಿ ಸದ್ದು ಮಾಡುತ್ತಿದೆ.
'ಟಾಕ್ಸಿಕ್' ಚಿತ್ರವು 1940 ರಿಂದ 1970 ರ ಕಾಲಘಟ್ಟದ ನಡುವೆ ನಡೆಯುವ ಗ್ಯಾಂಗ್‌ಸ್ಟರ್ ಡ್ರಾಮಾ ಆಗಿದ್ದು, ವಿಶೇಷವೆಂದರೆ ಈ ಚಿತ್ರಕ್ಕೆ ಸ್ವತಃ ಯಶ್ ಅವರೇ ಸಹ-ಲೇಖಕರಾಗಿ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ ದಕ್ಷಿಣದ ಸ್ಟಾರ್ ನಟಿ ನಯನತಾರಾ, ಹುಮಾ ಖುರೇಶಿ ಹಾಗೂ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಹಿಂದೆ ಸಂದರ್ಶನದಲ್ಲಿ ಭಾಗವಹಿಸಿದ್ದ ಯಶ್ ಈ ಚಿತ್ರವು ಕೇವಲ ಸಾಮಾನ್ಯ ಗ್ಯಾಂಗ್‌ಸ್ಟರ್ ಕಥೆಯಲ್ಲ, ಬದಲಾಗಿ ಮಾನವ ಮನೋವಿಜ್ಞಾನದ ಆಳವಾದ ಪದರಗಳನ್ನು ಕೆದಕುವ ವಿಭಿನ್ನ ಪ್ರಯತ್ನ ಎಂದು ಅವರು ಹಾಲಿವುಡ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದರು.

