
ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
‘ಟಾಕ್ಸಿಕ್’ ಬಿಡುಗಡೆಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಯಶ್
‘ಟಾಕ್ಸಿಕ್’ ಬಿಡುಗಡೆಗೂ ಮುನ್ನ ನಟ ಯಶ್ ಚೆನ್ನೈನಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಯಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಸಿನಿಮಾ ಬಿಡುಗಡೆಗೆ ಒಂದು ದಿನ ಮುನ್ನ ನಟ ಯಶ್ ಅವರು ಮಂಗಳವಾರ ತಮಿಳುನಾಡಿನ ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
Karnataka: Actor Yash arrives in Mangaluru; to visit temple in Dharmasthala ahead of release of movie 'Toxic' on Aug 26. pic.twitter.com/B3pbJ2pBlV
— News Arena India (@NewsArenaIndia) August 25, 2026
ಮಂಗಳೂರಿಗೆ ಬಂದಿಳಿದ ಯಶ್ ಅವರಿಗೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಅವರು ನೇರವಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ‘ಟಾಕ್ಸಿಕ್’ ಸಿನಿಮಾ ಭರ್ಜರಿ ಯಶಸ್ಸು ಕಾಣಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಮ್ಮ ಸಿನಿಮಾಗಳ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುವುದನ್ನು ಯಶ್ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದಾರೆ. ಇದೀಗ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಸಂದರ್ಭದಲ್ಲೂ ಅದೇ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.

