‘ಟಾಕ್ಸಿಕ್’ ಅಡ್ವಾನ್ಸ್ ಬುಕಿಂಗ್‌ಗೆ ಡೇಟ್ ಫಿಕ್ಸ್: ಆಗಸ್ಟ್ 21ರಿಂದ ಟಿಕೆಟ್ ಮಾರಾಟ
x

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಕಾತರಕ್ಕೆ ತೆರೆ ಬೀಳುವ ಸಮಯ ಹತ್ತಿರವಾಗಿದೆ.

‘ಟಾಕ್ಸಿಕ್’ ಅಡ್ವಾನ್ಸ್ ಬುಕಿಂಗ್‌ಗೆ ಡೇಟ್ ಫಿಕ್ಸ್: ಆಗಸ್ಟ್ 21ರಿಂದ ಟಿಕೆಟ್ ಮಾರಾಟ

ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರಕ್ಕಾಗಿ ಅಭಿಮಾನಿಗಳ ಕಾಯುವಿಕೆ ಅಂತ್ಯವಾಗುತ್ತಿದೆ. ಆಗಸ್ಟ್ 21ರಿಂದ ಅಡ್ವಾನ್ಸ್ ಬುಕಿಂಗ್ ಆರಂಭವಾಗಲಿದ್ದು, ಆಗಸ್ಟ್ 26ಕ್ಕೆ ಸಿನಿಮಾ ರಿಲೀಸ್ ಆಗಲಿದೆ.


Click the Play button to hear this message in audio format

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಅಧಿಕೃತ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಭಾರತದಲ್ಲಿ ಆಗಸ್ಟ್ 21ರಿಂದ ಆರಂಭವಾಗಲಿದೆ. ಆಗಸ್ಟ್ 26ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆಯಾಗಲಿದ್ದು, ಟಿಕೆಟ್ ಬುಕಿಂಗ್ ಆರಂಭಕ್ಕೂ ಮುನ್ನವೇ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿದೆ.

ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಜೊತೆ ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಹಾಗೂ ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಕೆಜಿಎಫ್ 2’ ಬಳಿಕ ಯಶ್ ನಟನೆಯ ಸಿನಿಮಾ ತೆರೆಗೆ ಬರುತ್ತಿರುವುದರಿಂದ ಚಿತ್ರದ ಆರಂಭಿಕ ಬುಕಿಂಗ್ ಭರ್ಜರಿಯಾಗುವ ನಿರೀಕ್ಷೆ ಇದೆ.

ಪ್ರಮುಖ ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆಯೂ ಇದ್ದು, ಬಿಡುಗಡೆಗೂ ಮುನ್ನವೇ ಸಿನಿಮಾದ ಬಾಕ್ಸ್ ಆಫೀಸ್ ಮೇಲೆ ಭಾರಿ ನಿರೀಕ್ಷೆ ಮೂಡಿದೆ. ಆಗಸ್ಟ್ 25ರ ಸಂಜೆ ಪ್ರೀಮಿಯರ್ ಪ್ರದರ್ಶನಗಳು ನಡೆಯಲಿವೆಯೇ ಎಂಬ ಕುತೂಹಲವೂ ಅಭಿಮಾನಿಗಳಲ್ಲಿದೆ. ಚಿತ್ರಕ್ಕೆ ‘ಎ’ ಪ್ರಮಾಣಪತ್ರ ದೊರೆತಿದ್ದು, ಸಿನಿಮಾದ ಒಟ್ಟು ಅವಧಿ 3 ಗಂಟೆ 14 ನಿಮಿಷಗಳಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸಿದ್ದಾರೆ.

Read More
Next Story