Have you passed SSLC? There are many vacancies for you in the Bangalore Civil Court!
x

ಸಿಟಿ ಸಿವಿಲ್‌ ನ್ಯಾಯಾಲಯಗಳ ಸಂಕೀರ್ಣ

SSLC ಪಾಸ್‌ ಆಗಿದ್ದೀರಾ ? ನಿಮಗಾಗಿ ಬೆಂಗಳೂರು ಸಿವಿಲ್ ಕೋರ್ಟ್‌ನಲ್ಲಿವೆ ಹಲವು ಹುದ್ದೆಗಳು!

ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ.


Click the Play button to hear this message in audio format

ರಾಜ್ಯ ನ್ಯಾಯಾಂಗ ಇಲಾಖೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಬೆಂಗಳೂರು ಸಿವಿಲ್ ಕೋರ್ಟ್ ಜೂನ್ 2026ರ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಒಟ್ಟು 88 ಗುಮಾಸ್ತ ಮತ್ತು ಚಾಲಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಜು. 30ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಚಾಲಕ ಹುದ್ದೆಗೆ ಆರಂಭಿಕ ಮಾಸಿಕ ವೇತನ 34,100 ರೂ. ಗುಮಾಸ್ತ ಹುದ್ದೆಗೆ 27 ಸಾವಿರ ರೂ. ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು. ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯೊಂದಿಗೆ, ಮಾನ್ಯತೆ ಹೊಂದಿರುವ ಹೆವಿ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್ ಹೊಂದಿರುವುದು ಕಡ್ಡಾಯ.

ವಯೋಮಿತಿ

1 ಜನವರಿ 2026 ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು. ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರಲಿದೆ. ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕ

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಹಿಂದುಳಿದ ವರ್ಗದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳಿಗೆ 150 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1, ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಚಾಲನಾ ಪರೀಕ್ಷೆ (ಚಾಲಕ ಹುದ್ದೆಗೆ) ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಆಸಕ್ತರು ಬೆಂಗಳೂರು ಸಿವಿಲ್ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಆನ್‌ಲೈನ್ ಲಿಂಕ್ ಮೂಲಕ ಜು. 1 ರಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ, ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ.

Read More
Next Story