Applications are invited for the posts of Civil Servant in various local bodies in Chikkaballapur!
x
ಸಾಂದರ್ಭಿಕ ಚಿತ್ರ (ಎಐ ಆಧಾರಿತ)

ಚಿಕ್ಕಬಳ್ಳಾಪುರದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಜಿಲ್ಲೆಯ ವಿವಿಧ ಸ್ಥಳೀಯ ನಗರಸಭೆಗಳಾದ, ಚಿಕ್ಕಬಳ್ಳಾಪುರ ನಗರಸಭೆ 28, ಚಿಂತಾಮಣಿ ನಗರಸಭೆ 59, ಶಿಡ್ಲಘಟ್ಟ ನಗರಸಭೆ 36 ಮತ್ತು ಗೌರಿಬಿದನೂರು ನಗರಸಭೆ 46 ಹುದ್ದೆಗಳು ಸೇರಿದಂತೆ ಒಟ್ಟು 169 ಹುದ್ದೆಗಳು ಖಾಲಿ ಇವೆ.


Click the Play button to hear this message in audio format

ಚಿಕ್ಕಬಳ್ಳಾಪುರ ಜಿಲ್ಲೆಯ ಯುವಜನರಿಗೆ ಹಾಗೂ ಈಗಾಗಲೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಜಿಲ್ಲೆಯಲ್ಲಿ ಖಾಲಿ ಇರುವ 169 ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೆ 30 ಕೊನೆಯ ದಿನಾಂಕವಾಗಿದೆ.

ಜಿಲ್ಲೆಯ ವಿವಿಧ ಸ್ಥಳೀಯ ನಗರಸಭೆಗಳಾದ, ಚಿಕ್ಕಬಳ್ಳಾಪುರ ನಗರಸಭೆ 28, ಚಿಂತಾಮಣಿ ನಗರಸಭೆ 59, ಶಿಡ್ಲಘಟ್ಟ ನಗರಸಭೆ 36 ಮತ್ತು ಗೌರಿಬಿದನೂರು ನಗರಸಭೆ 46 ಹುದ್ದೆಗಳು ಸೇರಿದಂತೆ ಒಟ್ಟು 169 ಹುದ್ದೆಗಳು ಖಾಲಿ ಇವೆ.

ನಗರಸಭೆಗಳಲ್ಲಿ ಹೊರಗುತ್ತಿಗೆ, ದಿನಗೂಲಿ ಅಥವಾ ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕ, ಲೋಡರ್ಸ್, ಯುಜಿಡಿ ಹೆಲ್ಪರ್ಸ್, ಕ್ಲೀನರ್ಸ್ ಹಾಗೂ ಹೆಲ್ಪರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಪ್ರಥಮ ಪ್ರಾಶಸ್ತ್ಯವಾಗಿ ಪರಿಗಣಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 50 ವರ್ಷ ವಯೋಮಿತಿ ಹೊಂದಿರಬೇಕು. ಸರ್ಕಾರದ ನಿಯಮಗಳ ಪ್ರಕಾರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಫ್‌ಲೈನ್ ಮೂಲಕ ನಡೆಯಲಿದ್ದು, ಅರ್ಜಿ ಸಲ್ಲಿಸುವ ಮೊದಲು ಜಿಲ್ಲಾಧಿಕಾರಿ ಕಚೇರಿ ಅಧಿಕೃತ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ, ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ. ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸಿನ ಪುರಾವೆ, ಶೈಕ್ಷಣಿಕ ಅರ್ಹತೆ ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಅನುಭವದ ಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯವಿರುವ ಎಲ್ಲಾ ಸ್ವಯಂ-ದೃಢೀಕೃತ ದಾಖಲೆಗಳನ್ನು ಲಗತ್ತಿಸಿ.

ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ ಅಥವಾ ಗೌರಿಬಿದನೂರು ಪುರಸಭೆ, ನಗರಸಭೆ ಕಚೇರಿಗಳಿಗೆ ನೋಂದಾಯಿತ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ತಲುಪಿಸುವಂತೆ ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
Next Story