
ಸಾಂದರ್ಭಿಕ ಚಿತ್ರ
Job News | 'ಐಪಿಆರ್'ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ; ಪರೀಕ್ಷೆ ಇಲ್ಲ, ಇಂದೇ ಅರ್ಜಿ ಸಲ್ಲಿಸಿ
ಒಟ್ಟು 50 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಪದವೀಧರ ಅಪ್ರೆಂಟಿಸ್ 32 ಹುದ್ದೆಗಳು, ಡಿಪ್ಲೊಮಾ ಅಪ್ರೆಂಟಿಸ್ 18 ಹುದ್ದೆಗಳು ನಿಗದಿಪಡಿಸಲಾಗಿದೆ.
ಕೇಂದ್ರ ಪರಮಾಣು ಇಂಧನ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ 'ಪ್ಲಾಸ್ಮಾ ಸಂಶೋಧನಾ ಸಂಸ್ಥೆ' (IPR) 2026ನೇ ಸಾಲಿನ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಹೊಸದಾಗಿ ಪದವಿ ಮತ್ತು ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳಿಗೆ ಭಾರತದ ಪ್ರಮುಖ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಕಲಿಯಲು ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸಲು ಮೇ 11 ಕೊನೆಯ ದಿನಾಂಕವಾಗಿದೆ.
ಒಟ್ಟು 50 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಪದವೀಧರ ಅಪ್ರೆಂಟಿಸ್ 32 ಹುದ್ದೆಗಳು, ಡಿಪ್ಲೊಮಾ ಅಪ್ರೆಂಟಿಸ್ 18 ಹುದ್ದೆಗಳು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು 2024, 2025 ಅಥವಾ 2026 ರಲ್ಲಿ ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾಗಿರಬೇಕು.
ಯಾವೆಲ್ಲಾ ವಿಭಾಗಗಳಿಗೆ ಅವಕಾಶ?
ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಹಾಗೂ ಇನ್ಸ್ಟ್ರುಮೆಂಟೇಶನ್ ವಿಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದಲ್ಲದೆ ಬಿ.ಕಾಂ, ಬಿ.ಎ ಮತ್ತು ಬಿಬಿಎ ಪದವೀಧರರಿಗೂ 'ಜನರಲ್ ಸ್ಟ್ರೀಮ್' ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಬೇರೆಡೆ ಅಪ್ರೆಂಟಿಸ್‌ಶಿಪ್ ತರಬೇತಿ ಪಡೆದವರಿಗೆ ಅವಕಾಶವಿಲ್ಲ.
ಪರೀಕ್ಷೆ, ಸಂದರ್ಶನ ಇಲ್ಲ
ಆಯ್ಕೆಯು ಸಂಪೂರ್ಣವಾಗಿ ಶೈಕ್ಷಣಿಕ ಅಂಕಗಳ ಮೆರಿಟ್ ಆಧಾರದ ಮೇಲೆ ನಡೆಯಲಿದ್ದು, ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ಪದವೀಧರರಿಗೆ 13,500 ರೂ. ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ 12 ಸಾವಿರ ರೂ. ಮಾಸಿಕ ಸ್ಟೈಫಂಡ್ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಕೇಂದ್ರ ಸರ್ಕಾರದ NATS (National Apprenticeship Training Scheme) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ವರ್ಗ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

