
ಅಂಗನವಾಡಿ ಕಾರ್ಯಕರ್ತೆಯರು (ಸಾಂದರ್ಭಿಕ ಚಿತ್ರ)
Job News | ಪಿಯುಸಿ, ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದ್ದೀರಾ ? ನಿಮಗಿಲ್ಲಿದೆ ಸುವರ್ಣಾವಕಾಶ !
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ವಿನಾಯಿತಿ ನೀಡಲಾಗಿದೆ.
ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರುವ ಯುವತಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುವರ್ಣ ಅವಕಾಶ ನೀಡಿದೆ. ಕಲಬುರಗಿ ಜಿಲ್ಲೆಯಲ್ಲಿ 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನಾಂಕವಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಲಬುರಗಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು 89 ಹುದ್ದೆಗಳು ಹಾಗೂ ಅಂಗನವಾಡಿ ಸಹಾಯಕಿಯರು 323 ಹುದ್ದೆಗಳಿದ್ದು, ಅಫ್ಜಲ್‌ಪುರದಲ್ಲಿ 41, ಆಳಂದದಲ್ಲಿ 88, ಚಿಂಚೋಳಿಯಲ್ಲಿ 49, ಚಿತ್ತಾಪುರದಲ್ಲಿ 34, ಜೀವರ್ಗಿ 44, ಕಲಬುರಗಿ ಗ್ರಾಮೀಣದಲ್ಲಿ 69, ಕಲಬುರಗಿ ನಗರದಲ್ಲಿ 11, ಸೇಡಂ 25, ಶಹಾಬಾದ್‌ನಲ್ಲಿ 51 ಹುದ್ದೆಗಳಿವೆ.
ವಯೋಮಿತಿ, ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಹಿಂದುಳಿದವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ವಿನಾಯಿತಿ ನೀಡಲಾಗಿದೆ. ಈ ಹುದ್ದೆಗಳಿಗೆ ಯಾವುದೇ ಪರೀಕ್ಷೆ ನಡೆಸುವುದಿಲ್ಲ. ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ ?
ಆನ್‌ಲೈನ್‌ನಲ್ಲಿ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ. ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕಲಬುರಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್: karnemakaone.kar.nic.in ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಬೇಕು. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು, ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ಕೊನೆಯದಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ. ಅರ್ಜಿ ಸಂಖ್ಯೆಯನ್ನು ದಾಖಲಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

