
ಸಾಂದರ್ಭಿಕ ಚಿತ್ರ
Job News |ಎಲ್‌ಎಲ್‌ಬಿ ಪೂರ್ಣಗೊಳಿಸಿದ್ದೀರಾ ? ಕಾನೂನು ಸೇವೆಗಳ ಪ್ರಾಧಿಕಾರದಲ್ಲಿದೆ ಸುವರ್ಣಾವಕಾಶ !
ಒಟ್ಟು 19 ಹುದ್ದೆಗಳ ಪೈಕಿ 17 ಹುದ್ದೆಗಳನ್ನು ಉಳಿಕೆ ಮೂಲ ವೃಂದಕ್ಕೆ (RPC) ಮೀಸಲಿಡಲಾಗಿದ್ದರೆ, ಕಲ್ಯಾಣ ಕರ್ನಾಟಕ (KKR) ವೃಂದಕ್ಕೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ.
ರಾಜ್ಯ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (KSLSA) ಖಾಲಿ ಇರುವ 19 ಸೆಕ್ಷನ್ ಆಫೀಸರ್ (ಶಾಖಾಧಿಕಾರಿ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದೆ.
ಒಟ್ಟು 19 ಹುದ್ದೆಗಳ ಪೈಕಿ 17 ಹುದ್ದೆಗಳನ್ನು ಉಳಿಕೆ ಮೂಲ ವೃಂದಕ್ಕೆ (RPC) ಮೀಸಲಿಡಲಾಗಿದ್ದರೆ, ಕಲ್ಯಾಣ ಕರ್ನಾಟಕ (KKR) ವೃಂದಕ್ಕೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 69,250 ರಿಂದ 1,34,200 ರೂ. ವರೆಗೆ ಆಕರ್ಷಕ ವೇತನ ಶ್ರೇಣಿ ಸಿಗಲಿದೆ.
ಅರ್ಹತೆಗಳೇನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ (LLB) ಪೂರೈಸಿರಬೇಕು. ಏ.16 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷದೊಳಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದಂತೆ ವಯೋಮಿತಿ ವಿನಾಯಿತಿ ದೊರೆಯಲಿದೆ.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಅತಿ ಹೆಚ್ಚು ಅಂಕಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1,000 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಏ. 16ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಮೇ 15, ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಕೂಡಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಕೆಇಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

