
ಪಶುವೈದ್ಯಕೀಯ ಮಹಾವಿದ್ಯಾಲಯ ಬೀದರ್
KVAFSU ನೇಮಕಾತಿ: ಬೀದರ್ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿಶ್ವವಿದ್ಯಾನಿಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಪ್ರಾಧ್ಯಾಪಕರು 20 ಹುದ್ದೆಗಳು, ಸಹ ಪ್ರಾಧ್ಯಾಪಕರು 22 ಹುದ್ದೆಗಳು ಹಾಗೂ ಸಹಾಯಕ ಪ್ರಾಧ್ಯಾಪಕರು 54 ಹುದ್ದೆಗಳು ಸೇರಿದಂತೆ ಒಟ್ಟು 96 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ರಾಜ್ಯ ಸರ್ಕಾರಿ ವಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯವು (KVAFSU) ಖಾಲಿ ಇರುವ ಒಟ್ಟು 96 ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ ?
ವಿಶ್ವವಿದ್ಯಾನಿಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಪ್ರಾಧ್ಯಾಪಕರು 20 ಹುದ್ದೆಗಳು, ಸಹ ಪ್ರಾಧ್ಯಾಪಕರು 22 ಹುದ್ದೆಗಳು ಹಾಗೂ ಸಹಾಯಕ ಪ್ರಾಧ್ಯಾಪಕರು 54 ಹುದ್ದೆಗಳು ಸೇರಿದಂತೆ ಒಟ್ಟು 96 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಶೈಕ್ಷಣಿಕ ಅರ್ಹತೆ, ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷಗಳು ಆಗಿರಬೇಕು. ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರಲಿದ್ದು, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕದ ವಿವರ
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1 ಸಾವಿರ ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ 500 ರೂ. ನಿಗದಿಪಡಿಸಲಾಗಿದ್ದು, ಶುಲ್ಕವನ್ನು ಆನ್‌ಲೈನ್ ಬ್ಯಾಂಕಿಂಗ್, ಡೆಬಿಟ್ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲಿಸಿ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್‌ನಲ್ಲಿ ಮೇ 21ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಜೂ. 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತರು KVAFSU ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಭರ್ತಿ ಮಾಡುವ ಮುನ್ನ ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ, ಸೂಕ್ತ ಗುರುತಿನ ಚೀಟಿ, ಶೈಕ್ಷಣಿಕ ದಾಖಲಾತಿಗಳು ಹಾಗೂ ರೆಸ್ಯೂಮ್ ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳುವುದು ಕಡ್ಡಾಯವಾಗಿದೆ ಎಂದು ವಿಶ್ವವಿದ್ಯಾನಿಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

