Good news for job seekers; Applications invited for Armed Police Constable posts!
x

ಕರ್ನಾಟಕ ಪೊಲೀಸ್‌ (ಸಂಗ್ರಹ ಚಿತ್ರ)

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ; ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1,600 ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ 179 ಹುದ್ದೆಗಳು ಹಾಗೂ ಮಿಕ್ಕುಳಿದ ವೃಂದದ 1,421 ಹುದ್ದೆಗಳನ್ನು ವಿಂಗಡಿಸಿದೆ.


Click the Play button to hear this message in audio format

ಪೊಲೀಸ್‌ ಇಲಾಖೆಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು ಹುದ್ದೆಗಳೆಷ್ಟು ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1,600 ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ 179 ಹುದ್ದೆಗಳು ಹಾಗೂ ಮಿಕ್ಕುಳಿದ ವೃಂದದ 1,421 ಹುದ್ದೆಗಳನ್ನು ವಿಂಗಡಿಸಿದ್ದು, ಅರ್ಜಿ ಸಲ್ಲಿಸಲು ಜು. 22 ಕೊನೆಯ ದಿನಾಂಕವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 37,500 ರಿಂದ 76,100 ರೂ ಮಾಸಿಕ ವೇತನ ಸಿಗಲಿದೆ.

ಅರ್ಹತಾ ಮಾನದಂಡಗಳು

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ಪಿಯುಸಿ ಪೂರ್ಣಗೊಳಿಸಿರಬೇಕು. ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 33 ವರ್ಷಗಳು ನಿಗದಿಪಡಿಸಲಾಗಿದ್ದು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2 ವರ್ಷ ಹಾಗೂ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ

ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ನಂತರ ಸಹಿಷ್ಣುತೆ ಪರೀಕ್ಷೆಯಲ್ಲಿ ದೈಹಿಕ ಗುಣಮಟ್ಟ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಲಿಖಿತ ಪರೀಕ್ಷೆಗೆ 90 ನಿಮಿಷ ನಿಗದಿಪಡಿಸಲಾಗಿದ್ದು, ಪ್ರತಿ ತಪ್ಪು ಉತ್ತರಕ್ಕೆ 0.25 ನಕಾರಾತ್ಮಕ ಅಂಕಗಳನ್ನು ಕಳೆಯಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ವಿಜ್ಞಾನ, ಭೂಗೋಳಶಾಸ್ತ್ರ, ಇತಿಹಾಸ, ಭಾರತದ ಸಂವಿಧಾನ, ರಾಷ್ಟ್ರೀಯ ಸ್ವಾತಂತ್ರ್ಯ ಚಳುವಳಿ, ಮಾನಸಿಕ ಸಾಮರ್ಥ್ಯ ಮತ್ತು ನೈತಿಕ ಶಿಕ್ಷಣದ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುವುದು ಎಂದು ಕೆಇಎ ತಿಳಿಸಿದೆ.

ಅರ್ಜಿ ಶುಲ್ಕ

ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ರೂ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ವಿಧಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಹಣ ಪಾವತಿ ಮಾಡಬೇಕಾಗಿದ್ದು, ಶುಲ್ಕ ಪಾವತಿಸಲು ಜು. 24 ಕೊನೆಯ ದಿನಾಂಕವಾಗಿದೆ. ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದ್ದು, ಸೆ. 6ರಂದು ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ತಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಅಗತ್ಯ ಶೈಕ್ಷಣಿಕ ದಾಖಲೆಗಳು, ಐಡಿ ಪ್ರೂಫ್ ಮತ್ತು ಇತ್ತೀಚಿನ ಛಾಯಾಚಿತ್ರದೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪೂರ್ಣಗೊಂಡ ನಂತರ ಮುಂದಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆಯನ್ನು ಪ್ರಿಂಟ್ ತೆಗೆದುಕೊಂಡು ಸುರಕ್ಷಿತವಾಗಿರಿಸಿಕೊಳ್ಳುವಂತೆ ಸಲಹೆ ನೀಡಿದೆ.

Read More
Next Story