ಪೊಲೀಸ್ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ; 3,991 ಸಿವಿಲ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
x

ಕರ್ನಾಟಕ ರಾಜ್ಯ ಪೊಲೀಸ್‌ (ಸಾಂದರ್ಭಿಕ ಚಿತ್ರ)

ಪೊಲೀಸ್ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ; 3,991 ಸಿವಿಲ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೋಮಾ, 12ನೇ ತರಗತಿ ಅಥವಾ ಪಿಯುಸಿ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು ಮತ್ತು ಗರಿಷ್ಠ 33 ವರ್ಷ ವಯಸ್ಸು ಮೀರಿರಬಾರದು.


Click the Play button to hear this message in audio format

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವಿವರ

ಪೊಲೀಸ್ ಇಲಾಖೆಯು ಈ ಬಾರಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದ ಎರಡಕ್ಕೂ ಹುದ್ದೆಗಳನ್ನು ಹಂಚಿಕೆ ಮಾಡಿದೆ. ಕಲ್ಯಾಣ ಕರ್ನಾಟಕ ವೃಂದ 596 ಹುದ್ದೆಗಳು ಹಾಗೂ ಉಳಿಕೆ ಮೂಲ ವೃಂದದ 3,395 ಹುದ್ದೆಗಳು ಸೇರಿದಂತೆ ಒಟ್ಟು 3,991 ಹುದ್ದೆಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 37,500 ರೂ. ರಿಂದ 76,100 ರೂ. ವರೆಗೆ ಆಕರ್ಷಕ ವೇತನ ದೊರೆಯಲಿದೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೋಮಾ, 12ನೇ ತರಗತಿ ಅಥವಾ ಪಿಯುಸಿ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಹೊಸ ನೇಮಕಾತಿ ನಿಯಮಗಳ ಪ್ರಕಾರ ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು ಮತ್ತು ಗರಿಷ್ಠ 33 ವರ್ಷ ವಯಸ್ಸು ಮೀರಿರಬಾರದು. ಸರ್ಕಾರದ ನಿಯಮಾವಳಿಗಳ ಪ್ರಕಾರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 2 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕದ ವಿವರ

ಸಾಮಾನ್ಯ ವರ್ಗ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ರೂ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 500 ರೂ. ನಿಗದಿಪಡಿಸಲಾಗಿದೆ. ಪರೀಕ್ಷೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲಾಗುವುದು. ಅಭ್ಯರ್ಥಿಗಳಿಗೆ ಒಎಂಆರ್‌ ಆಧಾರಿತ ಆಫ್‌ಲೈನ್ ಪರೀಕ್ಷೆ ನಡೆಸಲಾಗುವುದು. ನಂತರ ದೈಹಿಕ ಸಹಿಷ್ಣುತೆ ಪರೀಕ್ಷೆ ಹಾಗೂ ವೈದ್ಯಕೀಯ ತಪಾಸಣೆ ನಡೆಸಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಜಿ ಶುರು ಯಾವಾಗ ?

ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕಿಂತ ಮುಂಚಿತವಾಗಿ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಜೂ. 8ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಜುಲೈ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾದ್ದು, ಅರ್ಜಿ ಶುಲ್ಕ ಪಾವತಿಸಲು ಜು. 4 ಕೊನೆಯ ದಿನಾಂಕವಾಗಿದೆ.

Read More
Next Story