x

ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ; 4,723 ಹುದ್ದೆಗಳು ಭರ್ತಿ

ಗ್ರಾಮ ಆಡಳಿತ ಅಧಿಕಾರಿ, ಲ್ಯಾಂಡ್ ಸರ್ವೆಯರ್, ಪೊಲೀಸ್‌ ಹಾಗೂ ವಸತಿ ಶಾಲೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ


Click the Play button to hear this message in audio format

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಮತ್ತು ಲ್ಯಾಂಡ್ ಸರ್ವೆಯರ್ ಹುದ್ದೆಗಳು, ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ ಹಾಗೂ ಕೆಎಸ್‌ಐಎಸ್‌ಎಫ್‌ ವಸತಿ ಶಾಲೆಗಳ ಶಿಕ್ಷಕರ ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Read More
Next Story