
ಕರ್ನಾಟಕ ಲೋಕಸೇವಾ ಆಯೋಗ
KPSC | ಕೆಎಎಸ್ ನೇಮಕಾತಿ; ಹೈಕೋರ್ಟ್ ಆದೇಶದಂತೆ ವ್ಯಕ್ತಿತ್ವ ಪರೀಕ್ಷೆಗೆ ಹೆಚ್ಚುವರಿ ಪಟ್ಟಿ ಬಿಡುಗಡೆ
ಒಟ್ಟು 303 ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮುಖ್ಯ ಪರೀಕ್ಷೆಯ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶ ಪತ್ರಗಳನ್ನು ಪಡೆದು ಪರೀಕ್ಷೆಗೆ ಹಾಜರಾಗಿದ್ದರು.
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-'ಎ' ಮತ್ತು ಗ್ರೂಪ್-'ಬಿ' ವೃಂದದ 384 ಹುದ್ದೆಗಳಿಗೆ ಸಂಬಂಧಿಸಿದಂತೆ, ವ್ಯಕ್ತಿತ್ವ ಪರೀಕ್ಷೆಗೆ ಅರ್ಹತೆ ಪಡೆದ 6 ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆಎಟಿ) ಮತ್ತು ಹೈಕೋರ್ಟ್‌ನಲ್ಲಿ ದಾಖಲಾಗಿದ್ದ ಹಲವು ರಿಟ್ ಅರ್ಜಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏ.6 ರಂದು ಅಂತಿಮ ಆದೇಶವನ್ನು ಹೊರಡಿಸಿತ್ತು. ಈ ಆದೇಶವನ್ನು ಪರಿಗಣಿಸಿ ಆಯೋಗವು, ಏ. 10ರಂದು ನಡೆದ ಸಭೆಯಲ್ಲಿ 6 ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸಲು ಹಾಗೂ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ನಿರ್ಣಯ ಕೈಗೊಂಡಿದೆ.
ಹೆಚ್ಚುವರಿ ಪಟ್ಟಿ ಬಿಡುಗಡೆ
ಒಟ್ಟು 303 ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮುಖ್ಯ ಪರೀಕ್ಷೆಯ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶ ಪತ್ರಗಳನ್ನು ಪಡೆದು ಪರೀಕ್ಷೆಗೆ ಹಾಜರಾಗಿದ್ದರು. ಮೌಲ್ಯಮಾಪನದ ನಂತರ, 1:3ರ ಅನುಪಾತದಲ್ಲಿ ಈ 6 ಅಭ್ಯರ್ಥಿಗಳನ್ನು ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆ ಮಾಡಲಾಗಿತ್ತು. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಈವರೆಗೂ ಮುಚ್ಚಿದ ಲಕೋಟೆಯಲ್ಲಿ ಇರಿಸಲಾಗಿದ್ದ ಈ ಪಟ್ಟಿಯನ್ನು ಇದೀಗ ಆಯೋಗ ಸಾರ್ವಜನಿಕವಾಗಿ ಪ್ರಕಟಿಸಿದೆ.
ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿರುವ ಪ್ರಕಟಣೆ
ಉಳಿಕೆ ಮೂಲ ವೃಂದದಲ್ಲಿ ಮಲ್ಲಿಕಾರ್ಜುನ ಮಡಿಹಳ್ಳಿ, ಅಭಿಲಾಶ್ ಕೆ.ಎಸ್, ಚೈತ್ರಾ ಡಿ, ಚಾಂದಿನಿ ಪಿ ರಾಜ್ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಚಲುವಾದಿ ರಾಮಕೃಷ್ಣ, ಶ್ರೀನಿವಾಸ ಚೈತನ್ಯ ಅವರ ಹೆಸರನ್ನು ಪ್ರಕಟಣೆಯಲ್ಲಿ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ಅಧಿಕೃತ ವೆಬ್‌ಸೈಟ್ http://kpsc.kar.nic.in/eligibility-list.html ವಿಳಾಸದಲ್ಲಿ ವೀಕ್ಷಿಸಬಹುದಾಗಿದೆ. ಮುಂದಿನ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ ಅನ್ನು ನಿಯಮಿತವಾಗಿ ಗಮನಿಸಲು ಆಯೋಗದ ಸೂಚಿಸಲಾಗಿದೆ.

