
ಸಾಂದರ್ಭಿಕ ಚಿತ್ರ
Job News | ಎಂಬಿಬಿಎಸ್, ನರ್ಸಿಂಗ್ ಪೂರ್ಣಗೊಳಿಸಿದ್ದೀರಾ? ನಿಮಗಿಲ್ಲಿದೆ ಸುವರ್ಣಾವಕಾಶ!
ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದವಿದ್ಯಾರ್ಹತೆ ಹೊಂದಿರಬೇಕು. ವೈದ್ಯಕೀಯ ಹುದ್ದೆಗಳಿಗೆ MBBS, DNB ಅಥವಾ ಸಂಬಂಧಿತ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಯಾದಗಿರಿ ಜಿಲ್ಲೆಯ ನಿರುದ್ಯೋಗಿಗಳಿಗೆ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿ ಜೀವನ ರೂಪಿಸಿಕೊಳ್ಳ ಬಯಸುವವರಿಗೆ ಇದೊಂದು ಸುವರ್ಣಾವಕಾಶ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS) 32 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನಾಂಕವಾಗಿದೆ.
ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು, ಲ್ಯಾಬ್ ತಂತ್ರಜ್ಞರು ಸೇರಿದಂತೆ ವಿವಿಧ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ವಿಭಾಗಗಳಿಗೆ ಅನುಗುಣವಾಗಿ ವೇತನ ನಿಗದಿಪಡಿಸಲಾಗಿದೆ
ಯಾವ ಹುದ್ದೆಗೆ ಎಷ್ಟು ವೇತನ ?
ಶಿಶುವೈದ್ಯರು - 1.30 ಲಕ್ಷ ರೂ. ಇಎನ್‌ಟಿ ತಜ್ಞರಿಗೆ 1.10 ಲಕ್ಷ ರೂ. ವೈದ್ಯಾಧಿಕಾರಿಗಳಿಗೆ 60 ಸಾವಿರ ರೂ. ಜಿಲ್ಲಾ ಆಸ್ಪತ್ರೆ ಗುಣಮಟ್ಟ ವ್ಯವಸ್ಥಾಪಕರಿಗೆ, 35 ಸಾವಿರ ರೂ. ಸಾಂಕ್ರಾಮಿಕ ರೋಗಶಾಸ್ತ್ರಜ್ಞರಿಗೆ 30 ಸಾವಿರ ರೂ. ಲ್ಯಾಬ್ ತಂತ್ರಜ್ಞರಿಗೆ 17,435 ರೂ. ನರ್ಸಿಂಗ್ ಅಧಿಕಾರಿಗಳಿಗೆ, 14 ಸಾವಿರ ರೂ. ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು 16,944 ರೂ. ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದವಿದ್ಯಾರ್ಹತೆ ಹೊಂದಿರಬೇಕು. ವೈದ್ಯಕೀಯ ಹುದ್ದೆಗಳಿಗೆ MBBS, DNB ಅಥವಾ ಸಂಬಂಧಿತ ಸ್ನಾತಕೋತ್ತರ ಪದವಿ. ತಾಂತ್ರಿಕ ಹುದ್ದೆಗಳಿಗೆ B.Sc (Nursing), MLT, ಡಿಪ್ಲೊಮಾ ಅಥವಾ ANM ಪೂರ್ಣಗೊಳಿಸಿರಬೇಕು.
ವಯೋಮಿತಿ
ಹುದ್ದೆಗಳ ಆಧಾರದ ಮೇಲೆ ವಯೋಮಿತಿ ನಿಗದಿಪಡಿಸಲಾಗಿದ್ದು, ಗರಿಷ್ಠ ವಯೋಮಿತಿ 50 ವರ್ಷ ಮೀರಿರಬಾರದು. ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ (ಮೆರಿಟ್ ಪಟ್ಟಿ) ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ. ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ಅಂಕಪಟ್ಟಿಗಳು, ಫೋಟೋ ಸಿದ್ಧಪಡಿಸಿಕೊಳ್ಳಿ. ಅರ್ಜಿಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ 'Submit' ಬಟನ್ ಕ್ಲಿಕ್ ಮಾಡಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್‌ಲೈನ್ ಲಿಂಕ್‌ಗಾಗಿ ಯಾದಗಿರಿ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್ ಅಥವಾ ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

