NIA Raids | ಅಲ್‌ಖೈದಾ ನಂಟು ಶಂಕೆ: ಕರ್ನಾಟಕ ಸೇರಿ 9 ಕಡೆ ಎನ್‌ಐಎ ದಾಳಿ
x
ಎನ್‌ಐಎ

NIA Raids | ಅಲ್‌ಖೈದಾ ನಂಟು ಶಂಕೆ: ಕರ್ನಾಟಕ ಸೇರಿ 9 ಕಡೆ ಎನ್‌ಐಎ ದಾಳಿ

ಬಾಂಗ್ಲಾದೇಶದ ಭಯೋತ್ಪಾದಕ ಗುಂಪು ಅಲ್-ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ಕರ್ನಾಟಕ ಸೇರಿದಂತೆ ದೇಶದ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಬಾಂಗ್ಲಾದೇಶದ ಭಯೋತ್ಪಾದಕ ಗುಂಪು ಅಲ್-ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ಕರ್ನಾಟಕ ಸೇರಿದಂತೆ ದೇಶದ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಸೋಮವಾರ (ನ.11) ದಾಳಿ ನಡೆಸಿದ್ದಾರೆ.

ಅಲ್ ಖೈದಾ ಜೊತೆಗೆ ನಂಟು ಹೊಂದಿರುವ ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಮತ್ತು ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳನ್ನು ಗುರಿಯಾಗಿಸಿ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ದಾಳಿ ಮಾಡಲಾಗಿದೆ. ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್‌ಗಳು ಸೇರಿದಂತೆ ಡಿಜಿಟಲ್ ಸಾಧನಗಳು ಮತ್ತು ಇತರ ಸಾಕ್ಷ್ಯಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದೋಷಾರೋಪಣೆ ದಾಖಲೆಗಳನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕಾರ್ಯಾಚರಣೆ ವೇಳೆ ವಶಪಡಿಸಿಕೊಂಡಿದ್ದಾರೆ.

2023ರ ನವೆಂಬರ್‌ನಲ್ಲಿ, ಮೊಹಮ್ಮದ್ ಎಂದು ಗುರುತಿಸಲಾದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿತ್ತು. ಸೋಜಿಬ್ಮಿಯಾನ್, ಮುನ್ನಾ ಖಾಲಿದ್ ಅನ್ಸಾರಿ ಅಲಿಯಾಸ್​ ಮುನ್ನಾ ಖಾನ್, ಅಜರುಲ್ ಇಸ್ಲಾಂ ಅಲಿಯಾಸ್​ ಜಹಾಂಗೀರ್ ಅಥವಾ ಆಕಾಶ್ ಖಾನ್, ಅಬ್ದುಲ್ ಲತೀಫ್ ಅಲಿಯಾಸ್​ ಮೊಮಿನುಲ್ ಅನ್ಸಾರಿ ಮತ್ತು ಐದನೇ ಆರೋಪಿ ಫರೀದ್ ಭಾರತೀಯ ಪ್ರಜೆಯಾನ್ನು ಬಂಧಿಸಲಾಗಿತ್ತು ಎಂದು ಎನ್​ಐಎ ತಿಳಿಸಿದೆ.

ಐವರು ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂಬುದು ಅವರ ಪೂರ್ವಾಪರದ ಬಗ್ಗೆ ಎನ್‌ಐಎ ತನಿಖೆ ನಡೆಸಿದಾಗ ತಿಳಿದು ಬಂದಿತ್ತು. ಭಾರತದಲ್ಲಿನ ಮುಸ್ಲಿಂ ಯುವಕರನ್ನು ಪ್ರೇರೇಪಿಸುವಲ್ಲಿ ಇವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಲ್-ಖೈದಾದ ಹಿಂಸಾತ್ಮಕ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದರು. ಹಣ ಸಂಗ್ರಹಿಸಿ ಅದನ್ನು ಅಲ್-ಖೈದಾಕ್ಕೆ ಕಳುಹಿಸುತ್ತಿದ್ದರು ಎನ್​ಐಎ ಮಾಹಿತಿ ನೀಡಿದೆ.

Read More
Next Story