Illegal Mining: ಅಕ್ರಮ ಗಣಿಗಾರಿಕೆ ಪ್ರಕರಣ ತನಿಖೆಗೆ ಸಿಬಿಐ ನಿರಾಕರಣೆ; ಎಸ್‌ಐಟಿಯಿಂದಲೇ ತನಿಖೆ
x

Illegal Mining: ಅಕ್ರಮ ಗಣಿಗಾರಿಕೆ ಪ್ರಕರಣ ತನಿಖೆಗೆ ಸಿಬಿಐ ನಿರಾಕರಣೆ; ಎಸ್‌ಐಟಿಯಿಂದಲೇ ತನಿಖೆ

ರಾಜ್ಯ ಸರ್ಕಾರ 9 ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಇವುಗಳ ಪೈಕಿ 6 ಪ್ರಕರಣಗಳ ತನಿಖೆ ಸಾಧ್ಯವಿಲ್ಲ ಎಂದು ಸಿಬಿಐ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಚಿಂತನೆ ನಡೆಸಿದೆ.


ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಕುರಿತಾದ ಆರು ಪ್ರಕರಣಗಳ ತನಿಖೆಗೆ ಸಿಬಿಐ ನಿರಾಕರಿಸಿದೆ. ಆದ್ದರಿಂದ ಈ ಆರು ಪ್ರಕರಣಗಳನ್ನು ಅಕ್ರಮ ಗಣಿಗಾರಿಕೆಯ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ವಹಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

ರಾಜ್ಯ ಸರ್ಕಾರ 9 ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಇವುಗಳ ಪೈಕಿ 6 ಪ್ರಕರಣಗಳ ತನಿಖೆ ಸಾಧ್ಯವಿಲ್ಲ ಎಂದು ಸಿಬಿಐ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಚಿಂತನೆ ನಡೆಸಿದೆ ಎಂದು ಸಚಿವ ಎಚ್.ಕೆ ಪಾಟೀಲ ತಿಳಿಸಿದರು.

ಗೋವಾದ ಮರ್ಮಗೋವಾ ಮತ್ತು ಪಣಜಿ, ತಮಿಳುನಾಡಿನ ಎನ್ನೋರ್ ಮತ್ತು ಚೆನ್ನೈ, ಕರ್ನಾಟಕದ ನವ ಮಂಗಳೂರು ಮತ್ತು ಕಾರವಾರ ಬಂದರು‌ ಹಾಗೂ ಆಂಧ್ರ ಪ್ರದೇಶದ ಕೃಷ್ಣ ಪಟ್ಟಣಂ, ಕಾಕಿನಾಡ ಮತ್ತು ವಿಶಾಖಪಟ್ಟಣಂ ಬಂದರುಗಳಲ್ಲಿ ಅಕ್ರಮ ಅದಿರು ಸಾಗಣೆ ಪ್ರಕರಣಗಳನ್ನು ಸಿಬಿಐ ವಾಪಸ್ ಕಳುಹಿಸಿದೆ. ಆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ನಿರ್ಣಯಿಸಲಾಗಿದೆ ಎಂದರು.

ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಗಳ ಬಳಿ ಇರುವ ಈ ಪ್ರಕರಣಗಳನ್ನು ವಾಪಸ್‌ ಪಡೆದು, ಎಸ್‌ಐಟಿ ತನಿಖೆಗೆ ವಹಿಸಲಾಗುವುದು. ಬೇಲೆಕೇರಿ ರೀತಿಯಲ್ಲಿಯೇ ಮದ್ರಾಸ್ ಬಂದರಿನಲ್ಲೂ ಅದಿರನ್ನು ಕದ್ದು ರಫ್ತು ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತರಿಸಿ ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಈ ಸಂಬಂಧದ ವಿವರಗಳನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದಿರಿಸಲು ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ಗಣಿ ಗುತ್ತಿಗೆ ಪ್ರಕರಣದ ವಿರುದ್ಧವೂ ತನಿಖೆ

ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ʼಸಿʼ ವರ್ಗದ 10 ಗಣಿ ಗುತ್ತಿಗೆದಾರರ ಪ್ರಕರಣಗಳನ್ನು ಕೂಡ ಈಗಿನ ಎಸ್ಐಟಿ ತನಿಖೆಗೆ ವಹಿಸಲು ನಿರ್ಣಯಿಸಲಾಗಿದೆ ಎಂದು ಎಚ್‌.ಕೆ. ಪಾಟೀಲ್‌ ವಿವರಿಸಿದರು.

ಮೇಸರ್ಸ್‌ ಮೈಸೂರು ಮ್ಯಾಂಗನೀಸ್ ಕಂಪನಿ, ಮೆ|| ಎಂ.ದಶರಥ ರಾಮಿ ರೆಡ್ಡಿ, ಮೆ|| ಅಲ್ಲಂ ವೀರಭದ್ರಪ್ಪ, ಮೆ|| ಕರ್ನಾಟಕ ಲಿಂಪೊ, ಮೆ|| ಅಂಜನಾ ಮಿನರಲ್ಸ್, ಮೆ|| ರಾಜೀಯ ಖಾನುಂ, ಮೆ|| ಮಿಲನ ಮಿನರಲ್ಸ್ (ಮಹಾಲಕ್ಷಿ & ಕಂ), ಮೆ|| ಎಂ.ಶ್ರೀನಿವಾಸುಲು, ಮೆ|| ಚನ್ನಕೇಶವ ರೆಡ್ಡಿ (ಲಕ್ಷ್ಮೀನರಸಿಂಹ ಮೈನಿಂಗ್ ಕಂಪನಿ) ಹಾಗೂ ಮೆ|| ಜಿ.ರಾಯಶೇಖರ್ ಕಂಪನಿಗಳು ಗುತ್ತಿಗೆ ಪಡೆದ ಪ್ರದೇಶದ ಹೊರಗೂ ಶೇ.10 ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿವೆ. ಇದರಿಂದ ಅರಣ್ಯ ಸಂರಕ್ಷಣೆ ಕಾಯ್ದೆ ಉಲ್ಲಂಘನೆಯಾಗಿದೆ. ಗಣಿ ಗುತ್ತಿಗೆ ಪಡೆದ ಈ ಮೇಲ್ಕಂಡ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಲೋಕಾಯುಕ್ತದ ವಿಶೇಷ ತನಿಖಾ ದಳಕ್ಕೆ ಸೂಚಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಹೇಳಿದರು.

Read More
Next Story