ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; ಮೂರು ನವಜಾತ ಶಿಶುಗಳು ಸಾವು
x

ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; ಮೂರು ನವಜಾತ ಶಿಶುಗಳು ಸಾವು

ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ (SNCU) ಮುಂಜಾನೆ ಸುಮಾರು 3.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ವೆಂಟಿಲೇಟರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


Click the Play button to hear this message in audio format

ಮಹಾರಾಷ್ಟ್ರದ ಅಮರಾವತಿಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮೂರು ನವಜಾತ ಶಿಶುಗಳು ಮೃತಪಟ್ಟಿವೆ. ಚಿಕಿತ್ಸೆ ಪಡೆಯುತ್ತಿದ್ದ ಹಲವಾರು ಶಿಶುಗಳನ್ನು ತುರ್ತುವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಅಮರಾವತಿ ಜಿಲ್ಲಾ ಮಹಿಳಾ ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ (SNCU) ಮುಂಜಾನೆ ಸುಮಾರು 3.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ವೆಂಟಿಲೇಟರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ವೇಳೆ SNCUನಲ್ಲಿ ಒಟ್ಟು 39 ನವಜಾತ ಶಿಶುಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಮತ್ತು ದಟ್ಟ ಹೊಗೆಯಿಂದಾಗಿ ಮೂವರು ಶಿಶುಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ವೈದ್ಯರು, ನರ್ಸ್‌ಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶಿಶುಗಳನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿದರು. ವೈದ್ಯಕೀಯ ಉಪಕರಣಗಳನ್ನು ಸಂಪರ್ಕದಿಂದ ತೆಗೆದುಹಾಕಿ, ಶಿಶುಗಳನ್ನು ತುರ್ತಾಗಿ ಘಟಕದಿಂದ ಹೊರಗೆ ಸ್ಥಳಾಂತರಿಸಲಾಯಿತು.

ಘಟನೆಯಲ್ಲಿ ಗಂಭೀರವಾಗಿ ಬಾಧಿತರಾದ ಆರು ನವಜಾತ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More
Next Story