SIR ವಿವಾದ: ಮೋದಿ–ಜ್ಞಾನೇಶ್ ಕುಮಾರ್‌ಗೆ ಅಭಿಜೀತ್ ದಿಪ್ಕೆ ಪ್ರಶ್ನೆ
ಎಸ್‌ಐಆರ್ ವಿವಾದದ ನಡುವೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜ್ಞಾನೇಶ್ ಕುಮಾರ್, ಮೋದಿ ಬೆಂಬಲ ಮತ್ತು ಮತದಾನದ ಹಕ್ಕಿನ ಬಗ್ಗೆ ಪ್ರಶ್ನಿಸಿದ್ದಾರೆ.
ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಮೂಲಕ ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ, ಪ್ರತಿಭಟನೆಗಳ ಮೇಲಿನ ನಿರ್ಬಂಧಗಳು ಮತ್ತು ಮತದಾನದ ಹಕ್ಕಿನ ರಕ್ಷಣೆಯ ಕುರಿತು ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಜ್ಞಾನೇಶ್ ಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ ಎಂಬುದಾಗಿಯೂ ದಿಪ್ಕೆ ಆರೋಪಿಸಿದ್ದಾರೆ. ಎಸ್‌ಐಆರ್ ವಿವಾದದ ಮುಂದಿನ ಹಂತವೇನು? ಚುನಾವಣಾ ಆಯೋಗದ ವಿರುದ್ಧದ ಹೋರಾಟ ಯಾವ ದಿಕ್ಕಿನಲ್ಲಿ ಸಾಗಲಿದೆ? ದೆಹಲಿಯ ಪತ್ರಿಕಾಗೋಷ್ಠಿಯ ಪ್ರಮುಖ ಹೇಳಿಕೆಗಳು ಮತ್ತು ರಾಜಕೀಯ ಬೆಳವಣಿಗೆಗಳನ್ನು ಈ ವಿಡಿಯೊದಲ್ಲಿ ವೀಕ್ಷಿಸಿ.
Next Story

